ಸಿಖ್ ಪ್ರತ್ಯೇಕತಾವಾದಿ ಹತ್ಯೆಗೆ ಸಂಚು: ಭಾರತೀಯ ಮಾಜಿ ಗುಪ್ತಚರ ಅಧಿಕಾರಿ ವಿರುದ್ಧ ಪ್ರಕರಣ ದಾಖಲಿಸಿದ ಅಮೆರಿಕ

Date:

Advertisements

ಕಳೆದ ವರ್ಷ ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್‌ ಸಿಂಗ್‌ ಪನ್ನೂ ವಿರುದ್ಧ ಕೊಲೆ ಸಂಚು ರೂಪಿಸಿದ ಆರೋಪದ ಮೇಲೆ ‘ರಾ’ ದ ಭಾರತೀಯ ಮಾಜಿ ಅಧಿಕಾರಿ ವಿಕಾಸ್‌ ಯಾದವ್‌ ವಿರುದ್ಧ ಅಮೆರಿಕದ ನ್ಯಾಯಾಂಗ ಇಲಾಖೆಯು ಆರೋಪಪಟ್ಟಿ ದಾಖಲಿಸಿದೆ. ಕೆನಡಾ ಮಾಡಿರುವ ಇತ್ತೀಚಿನ ಆರೋಪಗಳ ಹಿನ್ನೆಲೆಯಲ್ಲಿ ಈ ಬೆಳವಣಿಗೆಯು ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚಿಸುವ ಸಾಧ್ಯತೆಯಿದೆ. ಸಿಖ್ ಪ್ರತ್ಯೇಕತಾವಾದಿ ಹತ್ಯೆಗೆ ಸಂಚು ರೂಪಿಸಿದ ಆರೋಪವನ್ನು ಭಾರತ ಸ್ಪಷ್ಟವಾಗಿ ನಿರಾಕರಿಸಿದೆ ಮತ್ತು ಆರೋಪಗಳನ್ನು ದೃಢೀಕರಿಸಲು ಯಾವುದೇ ಪುರಾವೆಗಳನ್ನು ಪ್ರಸ್ತುತಪಡಿಸಲಾಗಿಲ್ಲ ಎಂದು ಹೇಳಿದೆ.

ಕೆಲವೇ ಗಂಟೆಗಳ ಮುನ್ನ, ವಿಕಾಸ್ ಮತ್ತು ಅಮಾನತ್ ಎಂದು ಕರೆಯಲ್ಪಡುವ 39 ವರ್ಷದ ಯಾದವ್ ವಿರುದ್ಧ ಕೊಲೆಗೆ ಸಂಚು ರೂಪಿಸಿದ ಮತ್ತು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆರೋಪ ಸಲ್ಲಿಸಿರುವುದಾಗಿ ಅಮೆರಿಕದ ನ್ಯಾಯಾಂಗ ಇಲಾಖೆ ಘೋಷಿಸಿದೆ.

ಈ ಸುದ್ದಿ ಓದಿದ್ದೀರಾ? ತೈವಾನ್ ವಿಚಾರದಲ್ಲಿ ಹಸ್ತಕ್ಷೇಪ ನಿಲ್ಲಿಸಿ: ಭಾರತಕ್ಕೆ ಚೀನಾ ಆಗ್ರಹ

Advertisements

ಯಾದವ್ ಅವರು ಭಾರತೀಯ ವಿದೇಶಾಂಗ ಸೇವೆ ಮತ್ತು ‘ರಾ’ ವಿಭಾಗದಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ ಎಂದು ಅಮೆರಿಕ ಹೇಳಿದೆ. ಅಲ್ಲದೆ ಈ ಹಿಂದೆ ಸಿಆರ್‌ಪಿಎಫ್‌ನಲ್ಲಿ ಫೀಲ್ಡ್ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವುದಾಗಿ ಯಾದವ್ ಹೇಳಿಕೊಂಡಿದ್ದಾರೆ ಎಂದು ಹೇಳಿದೆ. ಯಾದವ್‌ಗೆ ಭಾರತದ ನಿರ್ದೇಶನವಿದೆ ಎಂದು ಆರೋಪಿಸಿದೆ.

ನ್ಯೂಯಾರ್ಕ್‌ನ ಸದರ್ನ್ ಡಿಸ್ಟ್ರಿಕ್ಟ್‌ನ ಜಿಲ್ಲಾ ನ್ಯಾಯಾಲಯದಲ್ಲಿ ದೋಷಾರೋಪಣೆ ಸಲ್ಲಿಸಲಾಗಿದ್ದು, ಯಾದವ್, 53 ವರ್ಷದ ನಿಖಿಲ್ ಗುಪ್ತಾ ಅವರ ಸಹ-ಸಂಚುಕೋರ ಎಂದು ಅಮೆರಿಕ ನ್ಯಾಯಾಂಗ ಇಲಾಖೆ ಆರೋಪಿಸಿದೆ. ಕಳೆದ ವರ್ಷ ನಿಖಿಲ್ ಗುಪ್ತಾ ಅವರ ವಿರುದ್ಧ ಆರೋಪ ಹೊರಿಸಿ ಅಮೆರಿಕ ಸರ್ಕಾರಕ್ಕೆ ಹಸ್ತಾಂತರಿಸಲಾಗಿತ್ತು.

“ನ್ಯಾಯಾಂಗ ಇಲಾಖೆಯು ಅಮೆರಿಕದ ನಾಗರಿಕರಿಗೆ ಹಾನಿ ಮಾಡಲು ಯತ್ನಿಸುವ ಯಾವುದೇ ವ್ಯಕ್ತಿಯನ್ನು ಅವರ ಸ್ಥಾನ ಅಥವಾ ಅಧಿಕಾರವನ್ನು ಲೆಕ್ಕಿಸದೆ ಹೊಣೆಗಾರರನ್ನಾಗಿ ಮಾಡುತ್ತದೆ ” ಎಂದು ಅಟಾರ್ನಿ ಜನರಲ್ ಮೆರಿಕ್ ಬಿ ಗಾರ್ಲ್ಯಾಂಡ್ ಅವರು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X