ಪ್ರಲ್ಹಾದ್‌ ಜೋಶಿ ತಮ್ಮ ತಲೆಮರೆಸಿಕೊಂಡಿದ್ದು ತನಿಖೆ ಮುಂದುವರಿದಿದೆ:‌ ಗೃಹ ಸಚಿವ ಪರಮೇಶ್ವರ್

Date:

Advertisements

-‌ ತುಮಕೂರಿನಲ್ಲಿ ವಿಮಾನ ನಿಲ್ದಾಣ ಮಾಡಿದರೆ ಅನುಕೂಲ: ಪರಮೇಶ್ವರ್

– ತುಮಕೂರನ್ನು ಗ್ರೇಟರ್ ಬೆಂಗಳೂರು ಎಂದು ಪರಿಗಣಿಸಲು ಪ್ರಸ್ತಾವನೆ ಸಲ್ಲಿಕೆ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸಹೋದರ ವಿರುದ್ಧ ಬಂದಿದೆ. ದೂರು ಬಂದಾಗ ಗಂಭೀರವಾಗಿ ತೆಗೆದುಕೊಳ್ಳಬೇಕಲ್ಲವೇ? ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಗೋಪಾಲ್ ಜೋಶಿ ಎಂಬುವರು ತಲೆಮರೆಸಿಕೊಂಡಿದ್ದು ತನಿಖೆ ಮುಂದುವರಿದಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದರು.

Advertisements

ಸದಾಶಿವನಗರದ‌ ತಮ್ಮ ನಿವಾಸದ ಬಳಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಪ್ರಕರಣದಲ್ಲಿ ಪ್ರಲ್ಹಾದ್‌ ಜೋಶಿ ಅವರ ಪಾತ್ರ ಇರುವುದು ನನಗೆ ಗೊತ್ತಿಲ್ಲ. ಬಂಧಿತರನ್ನು ವಿಚಾರಣೆ ನಡೆಸಿ, ಹೇಳಿಕೆ ಪಡೆದಾಗ ಯಾರಿದ್ದಾರೆ ಎಂಬುದು ಗೊತ್ತಾಗುತ್ತದೆ. ತನಿಖೆಗೆ ಮೊದಲೇ ಹೇಳುವುದು ಸರಿಯಲ್ಲ. ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದು ತನಿಖೆಯಲ್ಲಿ ಗೊತ್ತಾಗಲಿದೆ. ವರದಿ ಬಾರದೆ ಏನು ಹೇಳಲು ಆಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಬೆಂಗಳೂರಿನ ಭಾಗವಾಗಿ ತುಮಕೂರು ಬೆಳೆಯುತ್ತಿದ್ದು, ವಿಮಾನ ನಿಲ್ದಾಣ‌ ಮಾಡಿದರೆ ಅನುಕೂಲವಾಗಲಿದೆ. 20 ಸಾವಿರ ಎಕರೆ ಜಾಗದಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. 150 ಕೈಗಾರಿಕೆಗಳು ಹಾಗೂ ಜಪಾನ್ ಟೌನ್‌ಶಿಪ್ ಬರುತ್ತಿದೆ. ಎಚ್‌ಎಎಲ್ ಹೆಲಿಕ್ಯಾಪ್ಟರ್ ಫ್ಯಾಕ್ಟರಿ ಕೆಲಸ ಆರಂಭಿಸಿದೆ. ಇನ್ನೂ ಹಲವು ದೊಡ್ಡ ಕೈಗಾರಿಕೆಗಲಕು ಬರಲಿವೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ವಿಮಾನ ನಿಲ್ದಾಣ ಮಾಡಿದರೆ ಉತ್ತಮ” ಎಂದರು.

“ಮುಂದಿನ ದಿನಗಳಲ್ಲಿ ತುಮಕೂರು ಅಭಿವೃದ್ಧಿಗೆ ಬೇರೆ ಬೇರೆ ಹೊಸ ಯೋಜನೆಗಳನ್ನು ಇಟ್ಟುಕೊಳ್ಳಲಾಗಿದೆ. ತುಮಕೂರು ಬೆಂಗಳೂರಿನ ಒಂದು ಭಾಗವಾಗಿ ಬೆಳೆಯುತ್ತಿದ್ದು ಗ್ರೇಟರ್ ಬೆಂಗಳೂರು ಎಂದು ಪರಿಗಣಿಸುವಂತೆ ಕೇಳಿಕೊಳ್ಳಲಾಗಿದೆ.‌ ನೆಲಮಂಗಲ, ದಾಬಸ್‌ಪೇಟೆವರೆಗೆ ಬೆಂಗಳೂರು ಬೆಳೆದಿದೆ. ತುಮಕೂರುವರೆಗೆ ಮೆಟ್ರೋ ರೈಲು ವಿಸ್ತರಣೆಗೂ ಪ್ರಸ್ತಾವನೆ ಸಲ್ಲಿಸಲಾಗಿದೆ.‌ ತುಮಕೂರನ್ನು ಗ್ರೇಟರ್ ಬೆಂಗಳೂರು ಎಂದು ಕರೆಯಬಹುದು. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು‌” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬ್ರೇಕಿಂಗ್ ನ್ಯೂಸ್‌ | ಕೇಂದ್ರ ಸಚಿವ ಜೋಶಿ ಕುಟುಂಬದ ವಿರುದ್ಧ ಬಿಜೆಪಿ ಮುಖಂಡೆಯಿಂದ ದೂರು; FIRನಲ್ಲಿ ಅಮಿತ್ ಶಾ ಹೆಸರು ಉಲ್ಲೇಖ

“ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಡಿಜಿ ಮಾಲಿನಿ ಕೃಷ್ಣಮೂರ್ತಿ ಅವರು ಭೇಟಿ ನೀಡಿದ್ದಾರೆ. ಇವತ್ತು ವರದಿ ನೀಡಲಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಆಂತರಿಕವಾಗಿ ಗಂಭೀರ ವಿಚಾರ ಆಗಿರುವುದರಿಂದ ಭೇಟಿ ನೀಡಿ ವರದಿ ನೀಡುವಂತೆ‌ ರಾಜ್ಯ ಬಂಧಿಖಾನೆ ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ” ಎಂದರು.

ಜಾತಿಗಣತಿ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ್‌, “ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರನ್ನು ಯಾವ ವಿಚಾರಕ್ಕೆ ಭೇಟಿ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಸರ್ಕಾರವು 160 ಕೋಟಿ ರೂ. ಖರ್ಚು ಮಾಡಿ ಜಾತಿಗಣತಿ ಸಮೀಕ್ಷೆ ನಡೆಸಿದೆ. ಅಷ್ಟೊಂದು ಹಣ ಖರ್ಚು ಮಾಡಿದ ಮೇಲೆ ಜನಗಳಿಗೆ ಗೊತ್ತಾಗಬೇಕಲ್ಲವೇ? ಮುಂದೆ ಏನು ಮಾಡುತ್ತೇವೆ ಎಂಬುದು ಎರಡನೇ ಪ್ರಶ್ನೆ. ಯಾವ ಸಮುದಾಯಗಳು ಎಷ್ಟೆಷ್ಟು ಸಂಖ್ಯೆಯಲ್ಲಿದ್ದಾರೆ ಎಂದು ಜನಸಮುದಾಯಕ್ಕೆ ತಿಳಿಸುವ ವರದಿಯನ್ನು ಸಚಿವ ಸಂಪುಟದ ಮುಂದೆ ತರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ‌. ಯಾವುದೇ ವಿಚಾರವನ್ನು ನೂರಕ್ಕೆ ನೂರರಷ್ಟು ಜನ ಒಪ್ಪಿಕೊಳ್ಳುವುದಿಲ್ಲ. ಪರ-ವಿರೋಧ ಇದ್ದೇ ಇರುತ್ತದೆ” ಎಂದು ಹೇಳಿದರು.

ಪೊಲೀಸ್ ದಂಪತಿ ವರ್ಗಾವಣೆ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಈಗಾಗಲೇ ನೂರಕ್ಕು ಹೆಚ್ಚು ಪೊಲೀಸ್ ದಂಪತಿ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ. ಕೆಲವರಿಗೆ ತೊಂದರೆಯಾದಾಗ ಬಂದು ನನಗೆ ಮನವಿ ಸಲ್ಲಿಸುತ್ತಾರೆ. ಅದನ್ನು ಪರಿಶೀಲಿಸಿ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X