ಕೊಡಗು ಜಿಲ್ಲೆಯ ಸಂಪಾಜೆಯ ಬಿಜೆಪಿ ನಾಯಕ ಕಳಗಿ ಬಾಲಚಂದ್ರ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದ್ದು, ನಾಳೆಗೆ ಶಿಕ್ಷೆಯ ಪ್ರಮಾಣವನ್ನು ಕೊಡಗಿನ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಆದೇಶಿಸಲಿದ್ದಾರೆ.
ಸಂಪಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಳಗಿ ಬಾಲಚಂದ್ರ ಅವನ್ನು 2019ರ ಮಾರ್ಚ್ 19ರಂದು ತಮ್ಮ ಓಮ್ನಿ ಕಾರಿಗೆ ಲಾರಿಯಿಂದ ಗುದ್ದಿ ಹತ್ಯೆ ಮಾಡಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಾದ ಸಂಪತ್, ಹರಿಪ್ರಸಾದ್ ಮತ್ತು ಜಯನ್ ಎಂಬುವವರನ್ನು ಮಡಿಕೇರಿ ಪೋಲೀಸರು ಬಂಧಿಸಿದ್ದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾರು-ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಜಾಮೀನಿನಲ್ಲಿ ಹೊರಗೆ ಬಂದಿದ್ದ ಆರೋಪಿಗಳಲ್ಲಿ ಸಂಪತ್ ಎಂಬಾತನನ್ನು ಸುಳ್ಯದ ಶಾಂತಿನಗರದಲ್ಲಿ ಹತ್ಯೆ ಮಾಡಲಾಗಿತ್ತು. ಉಳಿದ ಇಬ್ಬರು ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್ ಮೇಲಿನ ಆರೋಪ ಸಾಬೀತುಗೊಂಡಿರುವುದರಿಂದ ಅಕ್ಟೋಬರ್ 19ರಂದು ಕೊಡಗು ಜಿಲ್ಲಾ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಪ್ರಶಾಂತಿ ಜಿ ಯವರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದ್ದಾರೆ.