ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ನಾಳೆ (ಮೆ 13) ಪ್ರಕಟಗೊಳ್ಳಲಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮತ ಎಣಿಕೆ ಬೆಳಗ್ಗೆಯಿಂದಲೇ ಆರಂಭವಾಗಲಿದೆ.
ಮತ ಎಣಿಕೆ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಿದ್ಥತೆಗಳನ್ನು ಚುನಾವಣೆ ಆಯೋಗ ಮಾಡಿಕೊಂಡಿದೆ. ರಾಜ್ಯದಲ್ಲಿ ಒಟ್ಟಾರೆ 34 ಕೇಂದ್ರಗಳಲ್ಲಿ ಮತ ಎಣಿಕೆಯ ನಡೆಯಲಿದೆ.
ಬಿಗಿಭದ್ರತೆಗಾಗಿ ಅರೆಸೇನಾ ಪಡೆಗಳ ನಿಯೋಜನೆ, ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೆಲವು ಜಿಲ್ಲೆಗಳಲ್ಲಿ 144 ಸೆಕ್ಷನ್ (ನಿಷೇಧಾಜ್ಞೆ) ಜಾರಿಗೊಳಿಸಲಾಗಿದೆ.
ಬೆಂಗಳೂರಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿಯವರು ಈ ಕುರಿತಂತೆ ಪ್ರಕಟಣೆ ಹೊರಡಿಸಿದ್ದಾರೆ. ಮೇ 13ರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಹಿನ್ನೆಲೆಯಲ್ಲಿ ಐವರಿಗಿಂತ ಹೆಚ್ಚು ಜನರು ಗುಂಪುಗೂಡದಂತೆ ನಿಷೇಧವಿರುತ್ತದೆ. ಹಾಗೆಯೇ ಇಂದು ರಾತ್ರಿಯಿಂದಲೇ ಮದ್ಯ ಮಾರಾಟಕ್ಕೆ ನಿಷೇಧ ಇರಲಿದೆ.