ಜಾರ್ಖಂಡ್ ಚುನಾವಣೆ | ಮೊದಲ ಹಂತದಲ್ಲಿ 900ಕ್ಕೂ ಅಧಿಕ ಮತದಾರರು ಶತಾಯುಷಿಗಳು!

Date:

Advertisements

ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಮಂಗಳವಾರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಜಾರ್ಖಂಡ್‌ನಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ನವೆಂಬರ್ 13ರಂದು ಮತ್ತು ಎರಡನೇ ಹಂತದ ಚುನಾವಣೆ ನವೆಂಬರ್ 20ರಂದು ನಡೆಯಲಿದೆ. ಮತ ಎಣಿಕೆಯು ನವೆಂಬರ್ 23ರಂದು ನಡೆಯಲಿದೆ.

ಮೊದಲ ಹಂತದಲ್ಲಿ ಒಟ್ಟು 43 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಅರ್ಹ ಮತದಾರರ ಪೈಕಿ 900ಕ್ಕೂ ಅಧಿಕ ಮಂದಿ ಶತಾಯುಷಿಗಳಾಗಿದ್ದಾರೆ. 100 ವರ್ಷ ದಾಟಿದ 900ಕ್ಕೂ ಅಧಿಕ ಜನರಲ್ಲಿ 533 ಮಂದಿ ಮಹಿಳೆಯರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ-ಜಾರ್ಖಂಡ್‌ ವಿಧಾನಸಭಾ ಚುನಾವಣೆ: ನವೆಂಬರ್ 13 ಮತ್ತು 20ಕ್ಕೆ ಮತದಾನ, 23ಕ್ಕೆ ಫಲಿತಾಂಶ

Advertisements

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅಧಿಕಾರಿಯೊಬ್ಬರು, “ಜಾರ್ಖಂಡ್‌ನಲ್ಲಿ ನವೆಂಬರ್ 13ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಮತದಾನ ಮಾಡಲು ಅರ್ಹರಾಗಿರುವ ಒಟ್ಟು ಮತದಾರರಲ್ಲಿ 995 ಮಂದಿ 100 ವರ್ಷ ದಾಟಿದವರಾಗಿದ್ದಾರೆ. ಈ ಪೈಕಿ 462 ಪುರುಷ ಮತದಾರರು, 533 ಮಹಿಳೆಯರಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಮಾಹಿತಿ ಪ್ರಕಾರ ಜಾರ್ಖಂಡ್‌ನಲ್ಲಿ ಒಟ್ಟು 2.60 ಕೋಟಿ ಮತದಾರರಿದ್ದು ಈ ಪೈಕಿ 1.13 ಲಕ್ಷ ಮತದಾರರು 85 ವರ್ಷ ದಾಟಿದ ಹಿರಿಯ ನಾಗರಿಕರಾಗಿದ್ದಾರೆ. ಮತದಾನ ಕೇಂದ್ರಗಳಲ್ಲಿ ವಿಕಲಚೇತನ ಮತ್ತು ಹಿರಿಯ ನಾಗರಿಕರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಕಾರ ಜಾರ್ಖಂಡ್‌ನಲ್ಲಿ, ಎಲ್ಲಾ ಮತದಾನ ಕೇಂದ್ರಗಳು ನೆಲ ಮಹಡಿಯಲ್ಲಿವೆ. ವಿಕಲಚೇತನ ಮತದಾರರು ಮತ್ತು ಹಿರಿಯ ನಾಗರಿಕರಿಗೆ ವೀಲ್‌ಚೇರ್ ವ್ಯವಸ್ಥೆಯಿದೆ. ಮತದಾನದ ದಿನದಂದು ಪ್ರತಿ ಮತಗಟ್ಟೆಯಲ್ಲಿ ಪಿಡಬ್ಲ್ಯುಡಿ ಮತ್ತು ಹಿರಿಯ ನಾಗರಿಕರ ಮತದಾರರಿಗೆ ಸೂಕ್ತ ಸಾರಿಗೆ ಸೌಲಭ್ಯವನ್ನು ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕ ಇಂದು ಘೋಷಣೆ

ನವೆಂಬರ್ 13ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಜಾರ್ಖಂಡ್‌ನ 43 ವಿಧಾನಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಶುಕ್ರವಾರದಿಂದ ಆರಂಭವಾಗಲಿದ್ದು, ಅಕ್ಟೋಬರ್ 25ರವರೆಗೆ ನಡೆಯಲಿದೆ. 11.84 ಲಕ್ಷ ಮಂದಿ ಹೊಸದಾಗಿ ಮತದಾನ ಮಾಡುತ್ತಿದ್ದರೆ, 1.13 ಲಕ್ಷ ವಿಕಲಚೇತನರು (ಪಿಡಬ್ಲ್ಯುಡಿ), ತೃತೀಯಲಿಂಗಿ ಮತ್ತು 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಸೇರಿದಂತೆ ಒಟ್ಟು 2.60 ಕೋಟಿ ಮತದಾರರು ಮುಂಬರುವ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಜಾರ್ಖಂಡ್‌ನಲ್ಲಿ ಈವರೆಗೆ ನಡೆದಿರುವ ವಿಧಾನಸಭೆ ಚುನಾವಣೆಗಳಲ್ಲಿ 2005ರ ಚುನಾವಣೆ (ಶೇಕಡ 57.3 ಮತದಾನ) ಹೊರತುಪಡಿಸಿ ಉಳಿದೆಲ್ಲಾ ಚುನಾವಣೆಯಲ್ಲಿಯೂ ಶೇಕಡ 60ಕ್ಕಿಂತ ಅಧಿಕ ಮತದಾನವಾಗಿದೆ. ಕೊಲ್ಹಾನ್ ಮತ್ತು ಸಂತಾಲ್ ಪರಗಣದಂತಹ ಗ್ರಾಮೀಣ ಪ್ರದೇಶಗಳಲ್ಲಿ ಅಧಿಕ ಜನರು ಮತದಾನದಲ್ಲಿ ಭಾಗಿಯಾಗಿದ್ದಾರೆ. ರಾಂಚಿಯಂತಹ ನಗರ ಪ್ರದೇಶವು ಮತದಾನ ಪ್ರಮಾಣದಲ್ಲಿ ಹಿಂದುಳಿದಿದೆ.

2019ರಲ್ಲಿ, ನಾಲಾದಲ್ಲಿ ಅತೀ ಹೆಚ್ಚು (ಶೇಕಡ 78.6) ಮತದಾನವಾಗಿದ್ದು ರಾಂಚಿಯಲ್ಲಿ ಅತೀ ಕಡಿಮೆ (ಶೇಕಡ 49.1) ಮತದಾನವಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X