ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಬಾಲಕಿಯರ ತಂಡ ಜಿಲ್ಲಾ ಮಟ್ಟದ ಖೋಖೋ ಪಂದ್ಯಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಸಮವಸ್ತ್ರ ವಿತರಣೆ ಮಾಡಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ದೈಹಿಕ ಶಿಕ್ಷಕ ನಟರಾಜ್ ಕೆ.ಆರ್ ಅವರು ಸತತವಾಗಿ ರಜೆಯಲ್ಲೂ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ಅ.20ರಂದು ದಸರಾ ಕವಿ-ಕಾವ್ಯ ಸಂಭ್ರಮ
ಇವರ ತರಬೇತಿ ಹಾಗೂ ವಿದ್ಯಾರ್ಥಿಗಳ ಕ್ರೀಡಾ ಮನೋಭಾವನೆ ಮೆಚ್ಚಿ ಆನಂದಪುರದ ಪ್ರಭಾಕರ್ ಎಂಬುವವರು ತಮ್ಮ ಸ್ವಂತ ಖರ್ಚಿನಲ್ಲಿಯೇ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.
ವರದಿ : ಅಮಿತ್ ಆರ್ ಆನಂದಪುರ