ತುಮಕೂರು | ದೂರುಗಳು ದುರುದ್ದೇಶಗಳಿಂದ ಕೂಡಿರಬಾರದು : ನ್ಯಾ. ಫಣೀಂದ್ರ

Date:

Advertisements

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ, ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ ದ್ವೇಷ ಹಾಗೂ ದುರುದ್ದೇಶಗಳಿಂದ ಕೂಡಿರಬಾರದು ಎಂದು ಕರ್ನಾಟಕ ರಾಜ್ಯ ಲೋಕಾಯುಕ್ತದ ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ತಿಳಿಸಿದರು.

ತುಮಕೂರು ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಶುಕ್ರವಾರ ಕರ್ನಾಟಕ ಲೋಕಾಯುಕ್ತ ಕಚೇರಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲುಗಳ ಸ್ವೀಕಾರ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನದ ಆಶಯದಂತೆ ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ಧ್ಯೇಯದಂತೆ ಎಲ್ಲರಿಗೂ ಸಮಾನ ನ್ಯಾಯವನ್ನು ಒದಗಿಸುವುದೇ ಲೋಕಾಯುಕ್ತದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರ ಬಳಿಗೆ ಬಂದು ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ ರಾಜ್ಯದ 17 ಜಿಲ್ಲೆಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ನಡೆಸಿ ಪರಿಹಾರ ನೀಡುವ ಪ್ರಯತ್ನ ಮಾಡಲಾಗಿದೆ. ಒಬ್ಬ ಸಾಮಾನ್ಯ ವ್ಯಕ್ತಿಗೂ ಸಹ ಉತ್ತಮ ಜೀವನ ರೂಪಿಸಿಕೊಳ್ಳಲು ಅವಕಾಶ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಮನುಷ್ಯ ಹುಟ್ಟಿದಾಗಿನಿಂದ ಸಾಯುವವರೆಗೂ ಗೌರವಯುತವಾಗಿ ಬದುಕಲು ಅಗತ್ಯವಿರುವ ಸಂವಿಧಾನಾತ್ಮಕ ಮೂಲಭೂತ ಹಕ್ಕುಗಳನ್ನು ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಹಕ್ಕುಗಳಿಗೆ ಚ್ಯುತಿ ಉಂಟಾದಾಗ ತನ್ನನ್ನು ತಾನು ರಕ್ಷಿಸಿಕೊಳ್ಳಲು ಕಾನೂನಿನ ಅರಿವು ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಕಾನೂನಿನ ಅರಿವನ್ನು ಹೊಂದಿರಬೇಕು ಎಂದು ತಿಳಿಸಿದರು.

Advertisements
1000557124

ಹಣ-ಅಧಿಕಾರದಿಂದ ಮಾತ್ರ ಸರ್ಕಾರಿ ಕೆಲಸ ನಡೆಯುತ್ತವೆ ಎಂಬ ನಂಬಿಕೆಯನ್ನು ದೂರ ಮಾಡಬೇಕು : ಸರ್ಕಾರಿ ಅಧಿಕಾರಿಗಳು ಸತ್ಯ, ನಿಷ್ಠೆಯಿಂದ ಕೆಲಸ ಮಾಡುವ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಸರ್ಕಾರಿ ಸೌಲಭ್ಯಗಳನ್ನು ತಲುಪಿಸಬೇಕು. ಹಣ ಮತ್ತು ಅಧಿಕಾರವಿದ್ದವರಿಗೆ ಮಾತ್ರ ಸರ್ಕಾರಿ ಸೇವೆ ದೊರೆಯುತ್ತವೆ ಎಂದು ಶೇ.80ರಷ್ಟು ಜನರಲ್ಲಿ ನಂಬಿಕೆ ಇದೆ. ಇಂಥಹ ನಂಬಿಕೆಯನ್ನು ತೊಲಗಿಸಲು ಸರ್ಕಾರಿ ಅಧಿಕಾರಿಗಳು ಅನಗತ್ಯ ವಿಳಂಬ ಮಾಡದೆ ಸಾರ್ವಜನಿಕರಿಗೆ ನ್ಯಾಯಯುತವಾಗಿ ನಿಗಧಿತ ಕಾಲಾವಧಿಯಲ್ಲಿ ಸೇವೆ ಒದಗಿಸಬೇಕು ಎಂದು ತಿಳಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ ಜಾರಿಗೆ ತರುವ ಆದೇಶಗಳನ್ನು ಸಮರ್ಪಕ ರೀತಿಯಲ್ಲಿ ಅನುಷ್ಠಾನಗೊಳಿಸುವ ಬಹುದೊಡ್ಡ ಜವಾಬ್ದಾರಿ ಕಾರ್ಯಾಂಗದ ಮೇಲಿದ್ದು, ಸರ್ಕಾರದ ಪ್ರಮುಖ ಆಧಾರ ಸ್ತಂಭವಾದ ಕಾರ್ಯಾಂಗವು ವ್ಯವಸ್ಥಿತವಾಗಿ ತನ್ನ ಕಾರ್ಯ ನಿರ್ವಹಿಸಿದಾಗ ಮಾತ್ರ ಗಾಂಧೀಜಿಯವರ ರಾಮ ರಾಜ್ಯದ ಕನಸನ್ನು ನನಸಾಗಿಸಲು ಸಾಧ್ಯವೆಂದು ತಿಳಿಸಿದರು.

1000557126

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಜಿಲ್ಲೆಯಲ್ಲಿ ಲೋಕಾಯುಕ್ತಕ್ಕೆ ಸಂಬಂಧಿಸಿದಂತೆ 180 ದೂರುಗಳು ದಾಖಲಾಗಿದ್ದು, ಅಕ್ಟೋಬರ್ 14ರಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಕಾನೂನಿನ ಚೌಕಟ್ಟಿನಡಿ ಬಾಕಿ ಇರುವ ದೂರು ಅರ್ಜಿಗಳನ್ನು ನಿಯಮಾನುಸಾರ ಶೀಘ್ರವಾಗಿ ವಿಲೇವಾರಿ ಮಾಡಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಭ್ರಷ್ಟಾಚಾರ ತಡೆಗಟ್ಟುವ ಉದ್ದೇಶದಿಂದ ಸಾರ್ವಜನಿಕ ಮಾಹಿತಿಗಾಗಿ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಪ್ರದರ್ಶಿಸಲಾಗಿದೆ ಎಂದು ತಿಳಿಸಿದರು.

1000557127

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ವಂದಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಲೋಕಾಯುಕ್ತ ಅಪರ ನಿಬಂಧಕ ಜೆ.ವಿ.ವಿಜಯಾನಂದ, ಉಪ ನಿಬಂಧಕರಾದ ಬಸವರಾಜಪ್ಪ ಕೆ.ಎಂ., ಅರವಿಂದ ಎನ್.ವಿ., ತುಮಕೂರು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ವಿ. ಲಕ್ಷ್ಮೀನಾರಾಯಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ ಮತ್ತು ಜಿಲ್ಲೆಯ ವಿವಿಧ ಅಧಿಕಾರಿಗಳು, ದೂರುದಾರರು, ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ದೂರು-ದುಮ್ಮಾನ ಹೊತ್ತು ತಂದಿದ್ದ 430ಕ್ಕೂ ಹೆಚ್ಚು ಸಾರ್ವಜನಿಕರಿಗೆ ಲೋಕಾಯುಕ್ತದಿಂದ ಟೋಕನ್ ವಿತರಿಸಲಾಗಿತ್ತು. ದೂರು ಅರ್ಜಿಗಳನ್ನು ಸ್ವೀಕರಿಸಿ ಪರಿಶೀಲಿಸಿದ ಉಪಲೋಕಾಯುಕ್ತ ಬಿ. ವೀರಪ್ಪ ಅವರು, ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X