ಹಾಸನ | ಶಾಸಕ ಶಿವಲಿಂಗೇಗೌಡರ ಆಡಿಯೋ ವೈರಲ್; ಜೆಡಿಎಸ್ ವಕ್ತಾರ ಎಸ್‌ಪಿಗೆ ದೂರು

Date:

Advertisements

ಲೋಕಸಭಾ ಚುನಾವಣೆ ವೇಳೆ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ನೀತಿಸಂಹಿತೆ ಉಲ್ಲಂಘನೆಯ ಮಾತುಗಳನ್ನಾಡಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜೆಡಿಎಸ್ ವಕ್ತಾರ ಹಾಸನ ಎಸ್‌ಪಿಗೆ ದೂರು ನೀಡಿದ್ದಾರೆ.

ಜೆಡಿಎಸ್ ಜಿಲ್ಲಾಧ್ಯಕ್ಷ ಕೆ ಎಸ್ ಲಿಂಗೇಶ್ ಸುದ್ದಿಗಾರರೊಂದಿಗೆ ಮಾತನಾಡಿ, “ಕಳೆದ ಲೋಕಸಭೆ ಚುನಾವಣೆ ವೇಳೆ ವಾಮ ಮಾರ್ಗದಿಂದ ಚುನಾವಣೆ ನೀತಿಸಂಹಿತೆ ಉಲ್ಲಂಘಿಸಿ ಚುನಾವಣೆ ಗೆದ್ದಿರುವುದು ಇತ್ತೀಚೆಗೆ ವೈರಲ್ ಆಗಿರುವ ಅರಸೀಕೆರೆ ಶಾಸಕ ಕೆ ಎಂ ಶಿವಲಿಂಗೇಗೌಡ ಅವರ ಆಡಿಯೋದಿಂದ ಬಹಿರಂಗವಾಗಿದೆ” ಎಂದು ಹೇಳಿದರು.

“ಸಂಸದ ಶ್ರೇಯಸ್ ಪಟೇಲ್, ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ಮಾಜಿ ಸಚಿವ ಬಿ ಶಿವರಾಂ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ ಎ ಗೋಪಾಲಸ್ವಾಮಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾ‌ರ್, ರಾಜ್ಯಸಭಾ ಸದಸ್ಯ ಚಂದ್ರಶೇಖ‌ರ್ ಸೇರಿದಂತೆ ಹಲವರು ಕೋಟ್ಯಂತರ ರೂಪಾಯಿ ಹಣ ಹಂಚಿಕೆಯಲ್ಲಿ ಭಾಗಿಯಾಗಿರುವ ಬಗ್ಗೆ ವೈರಲ್ ಆಗಿರುವ ಆಡಿಯೋದಲ್ಲಿ ಉಲ್ಲೇಖವಾಗಿದೆ” ಎಂದು ಹೇಳಿದರು.

Advertisements
ಜೆಡಿಎಸ್ 7

“ಮತದಾರರಿಗೆ ಹಣ ಹಂಚಿರುವ ಬಗ್ಗೆ ಆಡಿಯೋದಲ್ಲಿ ದಾಖಲೆಗಳಿವೆ. ಜತೆಗೆ ಪ್ರತಿಯೊಬ್ಬರೂ ಕೋಟ್ಯಂತರ ರೂಪಾಯಿ ಹಣ ಹಂಚಿಕೆಗೆ ಬಳಸಿದ್ದಾರೆ. ಅವರೆಲ್ಲರಿಗೂ ಹಣ ಹೇಗೆ ಬಂತು ಎಂಬ ಬಗ್ಗೆ ತನಿಖೆ ನಡೆಸಬೇಕು. ಜತೆಗೆ ಚುನಾವಣಾ ಆಯೋಗದ ನೀತಿ ನಿಯಮಗಳನ್ನು ಗಾಳಿಗೆ ತೂರಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಚುನಾವಣಾ ಆಯೋಗ, ಇ.ಡಿ ಸೇರಿದಂತೆ ಇತರ ತನಿಖಾ ಸಂಸ್ಥೆಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್‌ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇಂದು ದೂರು ಸಲ್ಲಿಸಿದ್ದಾರೆ.

ಘಟನೆ ಹಿನ್ನೆಲೆ

ಲೋಕಸಭೆ ಚುನಾವಣೆ ವೇಳೆ ಹಾಸನ ಜಿಲ್ಲಾದ್ಯಂತ ಕೋಟ್ಯಂತರ ರೂಪಾಯಿ ಹಂಚಲಾಗಿದೆಯೆಂದು ಅರಸೀಕೆರೆ ಶಾಸಕ ಕೆ ಎಂ ಶಿವಲಿಂಗೇಗೌಡ ಹೇಳಿರುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಎಂ, ಡಿಸಿಎಂ ನಿರ್ದೇಶನದಂತೆ ಹಣ ಹಂಚಬೇಕು. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 5 ಕೋಟಿ ರೂ., ಮಾಜಿ ಎಂಎಲ್‌ಸಿ ಗೋಪಾಲಸ್ವಾಮಿ 1 ಕೋಟಿ ರೂ., ನಾನು 1 ಕೋಟಿ ರೂ. ನೀಡುತ್ತೇನೆ. ಒಟ್ಟಾರೆ 7 ಕೋಟಿ ರೂ. ಹಂಚಬೇಕೆಂದು ಶಾಸಕ ಶಿವಲಿಂಗೇಗೌಡ ತಮ್ಮ ಪಕ್ಷದ ಮುಖಂಡರ ಜತೆಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್‌ ವೈರಲ್‌ ಆಗಿದೆ ಎನ್ನಲಾಗುತ್ತಿದೆ.

ಪ್ರತಿ ವೋಟಿಗೆ ಐದು ನೂರು ರೂಪಾಯಿ ಕೊಡಬೇಕು. ಒಟ್ಟು ಶೇಕಡಾ 68 ರಿಂದ 70 ಜನರಿಗೆ ಹಣ ಕೊಡಿ. ಯಾರು ನಮಗೆ ವೋಟ್ ಹಾಕುತ್ತಾರೆ ಎಂಬುದು ಗೊತ್ತಿರುತ್ತೆ, ಅವರಿಗೆ ಕೊಡಿ. ಅವರು ಶೇ.30ರಷ್ಟು ವೋಟು ತೆಗೆದುಕೊಳ್ಳುತ್ತಾರೆ, ಅವರಿಗೆ ಕೊಡೋದು ಬೇಡ. ಸಿಎಂ, ಡಿಸಿಎಂ, ಉಸ್ತುವಾರಿ ಅವರೇ ತೀರ್ಮಾನ ಮಾಡಿದ್ದಾರೆ. ಅದರಂತೆ ಹಂಚಲಿ. ಶಿವರಾಂ ಅವರು ಮನೆಗೊಂದು ಸಾವಿರ ಕೊಡುತ್ತಿದ್ದಾರಂತೆ. ಅವರ ಶಿಷ್ಯನೇ ಹೇಳಿದ್ದಾರೆ, ಅವರು ಐದು ನೂರು ರೂಪಾಯಿ ಕೊಟ್ಟಿದಾರೆ ಎಂಬುದಾಗಿ” ಎಂದಿರುವ ಆಡಿಯೋ ವೈರಲ್‌ ಆಗಿದೆ.

ಈ ಸುದ್ದಿ ಓದಿದ್ದೀರಾ? ಉಪಚುನಾವಣೆ | ಸಂಡೂರಿನ ರಾಜಕೀಯ ಇತಿಹಾಸ; ಗೆಲುವು ಯಾರ ತೆಕ್ಕೆಗೆ?

ನಾವೂ ಕೂಡಾ ಒಂದು ವೋಟಿಗೆ ₹500 ಕೊಡಬೇಕು ಎಂದಿರುವುದು ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಬಿ ಶಿವರಾಂ ಅವರ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿರುವುದು ಆಡಿಯೋದಲ್ಲಿದೆ. ʼತೀರ್ಮಾನ ಆಗಿರುವುದು ಐದು ನೂರು ರುಪಾಯಿ ಹಂಚಬೇಕೆಂದು, ಅಷ್ಟು ಹಂಚದಿದ್ದರೆ ಚೆನ್ನಾಗಿರಲ್ಲʼ ಎಂದು ಮಾತನಾಡಿರುವುದು ಆಡಿಯೋದಲ್ಲಿದೆ ಎನ್ನಲಾಗಿದೆ.

ಎಸ್‌ಪಿಗೆ ದೂರು ನೀಡುವ ಸಂದರ್ಭದಲ್ಲಿ ಜೆಡಿಎಸ್ ವಕ್ತಾರ ಹೊಂಗೆರೆ ರಘು, ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್ ದ್ಯಾವೇಗೌಡ, ವಕೀಲ ಪೂರ್ಣಚಂದ್ರ ತೇಜಸ್ವಿ ಸೇರಿದಂತೆ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X