ಸಿಎಂ ರಾಜೀನಾಮೆ ನೀಡಲಿ, ಸಚಿವ ಬೈರತಿ ಸುರೇಶ್ ಬಂಧನವಾಗಲಿ: ಶೋಭಾ ಕರಂದ್ಲಾಜೆ ಆಗ್ರಹ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾಪ್ತ, ಮುಡಾ ಅಧ್ಯಕ್ಷ ಮರಿಗೌಡರ ರಾಜೀನಾಮೆ ಪಡೆದುದು ಯಾಕೆ? ಅವರ ರಾಜೀನಾಮೆ ಪಡೆದು ಅವರ ಮೇಲೆ ಹಗರಣವನ್ನು ಹೊರಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಆರೋಪಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕು, ಬೈರತಿ ಸುರೇಶ್ ಅವರನ್ನು ತಕ್ಷಣ ಬಂಧಿಸಬೇಕು. ಬೈರತಿ ಸುರೇಶ್ ಬಂಧನವಾದರೆ ಮಾತ್ರ ಸತ್ಯ ಹೊರಕ್ಕೆ ಬರಲಿದೆ. ಅವರು ತಂದ ಕಡತಗಳ ವಿವರ ಪಡೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

“ಮುಡಾ ಕಾರ್ಯದರ್ಶಿಯನ್ನು ಅಮಾನತು ಮಾಡಿದ್ದಾರೆ. ಬಳಿಕ ಅಮಾನತು ವಾಪಸ್ ಪಡೆದಿದ್ದಾರೆ. ಸಿದ್ದರಾಮಯ್ಯನವರು 2013ರಲ್ಲಿ ತಮ್ಮ ಕೇಸುಗಳಿಂದ ಹೊರಕ್ಕೆ ಬರಲು ಲೋಕಾಯುಕ್ತವನ್ನು ಮುಚ್ಚಿದ್ದರು. ಟರ್ಫ್ ಕ್ಲಬ್ ಕೇಸಿನಲ್ಲಿ ಸ್ಟೂವರ್ಡ್ ಮಾಡಲು ಚೆಕ್‍ನಲ್ಲಿ 1.30 ಕೋಟಿ ಪಡೆದವರು ಸಿದ್ದರಾಮಯ್ಯ. ಸಿದ್ದರಾಮಯ್ಯನವರು ಹೇಗೆ ಭ್ರಷ್ಟಾಚಾರರಹಿತರು”ಎಂದು ಪ್ರಶ್ನಿಸಿದರು.

Advertisements

“ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಮೈಸೂರಿಗೆ ಹೋಗಿ 1997ರ ನಂತರದ ಎಲ್ಲ ಕಡತಗಳನ್ನು ಕಾರಿನಲ್ಲಿ ತುಂಬಿಸಿ ತಂದಿದ್ದಾರೆ. ಅವು ಎಲ್ಲಿ ಹೋಗಿವೆ? ಅವನ್ನು ಸುಟ್ಟು ಹಾಕಲಾಗಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೋಪಾಲ್ ಜೋಶಿ ಪ್ರಕರಣ ಮತ್ತು ಮಾರಿಕೊಂಡ ಮಾಧ್ಯಮಗಳು

ನಿವೇಶನ ವಾಪಸ್ ಕೊಟ್ಟಿದ್ದೇ ಅಪರಾಧಕ್ಕೆ ಮೊದಲ ಸಾಕ್ಷಿ

“ಸಿಎಂ ಪತ್ನಿಗೆ ನಿವೇಶನ ಕೊಡುವ ಸಂಬಂಧ ಮುಡಾ ನಿರ್ಧಾರವಾದಾಗ ಸಿದ್ದರಾಮಯ್ಯರ ಮಗ ಯತೀಂದ್ರ ಶಾಸಕರಾಗಿದ್ದರು. ಮುಡಾ ಸದಸ್ಯರೂ ಆಗಿದ್ದರು. ಅವರ ಮೂಗಿನ ನೇರಕ್ಕೆ ನಿರ್ಧಾರವಾಗಿದ್ದು, ದಬಾವಣೆಯಿಂದ ನಿವೇಶನಗಳು ಸಿಕ್ಕಿವೆ” ಎಂದು ಆರೋಪಿಸಿದರು.

“ಭ್ರಷ್ಟಾಚಾರದಿಂದ ದುಡ್ಡು ಮಾಡುವುದೇ ದಂಧೆ ಎಂಬಂತಾಗಿದೆ. ಸಿದ್ದರಾಮಯ್ಯನವರು ಅತ್ಯಂತ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಆದರೆ, ಅವರು ಈ ಬಾರಿ ಹಣಕಾಸು ಸಚಿವರಾಗಿದ್ದು ಕೇವಲ ಭ್ರಷ್ಟಾಚಾರ ಮಾಡಲೆಂದು ಸಾಬೀತಾಗುತ್ತಿದೆ” ಎಂದು ಟೀಕಿಸಿದರು.

“ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವರು ಮಾಡಿದ ಭ್ರಷ್ಟಾಚಾರ, ರಾಷ್ಟ್ರೀಯ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹಣ ಹೋಗಿರುವುದೇ ಭ್ರಷ್ಟಾಚಾರ ಮಾಡುವುದಕ್ಕಾಗಿ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಈ ನಿಗಮಕ್ಕೆ ಹಣ ಕೊಟ್ಟು ಚುನಾವಣೆಗೆ ಬಳಸುವುದನ್ನು ಸರಕಾರ ಮಾಡಿದೆ” ಎಂದು ಆರೋಪಿಸಿದರು.

ವಿಧಾನಪರಿಷತ್ ಸದಸ್ಯ ಡಿ ಎಸ್ ಅರುಣ್, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್.ಹರೀಶ್ ಅವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X