ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಗಜಾನನ ಕಂಪನಿಯ ಖಾಸಗಿ ಬಸ್ ಹಾಗೂ ಅಂದಾಸರದಿಂದ ಸಾಗರದ ಕಡೆ ತೆರಳುತ್ತಿದ್ದಾಗ ಮುಂಬಾಳು ಮಸೀದಿ ಹತ್ತಿರ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಚಾಲಕ ಸತೀಶ್ ಹಾಗೂ ಭೈರಪ್ಪ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಈ ಸುಸದ್ದಿ ಓದಿದ್ದೀರಾ? ಬೆಳಗಾವಿ | ಕಂಟೇನರ್ ವಾಹನಕ್ಕೆ ಬೈಕ್ ಡಿಕ್ಕಿ: ಯುವಕ ಸಾವು
ಬಸ್ಸಿನ ಚಾಲಕ ಎದುರು ಬಂದ ದನವನ್ನು ತಪ್ಪಿಸಲು ಹೋಗಿ ಬಸ್ ಚಾಲಕ ಬಲಭಾಗಕ್ಕೆ ಬಸ್ ಚಲಾಯಿಸಿದ್ದಾನೆ. ಹೀಗಾಗಿ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದಂತಹ ವ್ಯಕ್ತಿಗಳು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಅಪಘಾತವಾದ ಸ್ಥಳಕ್ಕೆ ಆನಂದಪುರ ಪೊಲೀಸ್ ಠಾಣೆಯ 112 ವಾಹನದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ : ಅಮಿತ್ ಆರ್, ಆನಂದಪುರ