ಕೊಡಗು | ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಶಾಸಕ ಡಾ ಮಂತರ್ ಗೌಡ

Date:

Advertisements

ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿದ್ದು, ಹಾರಂಗಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹಾಗೂ ಕಾವೇರಿ ಸಂಕ್ರಮಣ ಸಮಯದಲ್ಲಿ ಶಾಸಕ ಡಾ ಮಂತರ್ ಗೌಡ ಹಾಗೂ ಅರಕಲಗೂಡು ವಿಧಾನಸಭಾ ಕ್ಷೇತ್ರ ಶಾಸಕ ಎ ಮಂಜು, ವಿಧಾನಪರಿಷತ್ ಸದಸ್ಯ ಎಂ ಪಿ ಸುಜಾ ಕುಶಾಲಪ್ಪ ಸೇರಿದಂತೆ ಹಲವರು ಹಾರಂಗಿ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಭಾಗಿನ ಅರ್ಪಿಸಿದರು.

ಶಾಸಕ ಮಂತರ್ ಗೌಡ ಮಾತನಾಡಿ, “ಹಾರಂಗಿ ಎಡದಂಡೆ ಮುಖ್ಯ ನಾಲೆ ಸಂಪರ್ಕಿಸುವ 6.87 ಕಿಮೀನಿಂದ 14.75 ಕಿಮೀವರೆಗೆ ಕಾಂಕ್ರೀಟಿಕರಣ ಮಾಡಲು ಸರ್ಕಾರದಿಂದ ₹72 ಕೋಟಿ ಬಿಡುಗಡೆಯಾಗಿದೆ. ಈ ಸಂಬಂಧ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದ್ದು, ತಾಂತ್ರಿಕ ಬಿಡ್‍ಗೆ ಅನುಮೋದನೆ ದೊರೆತಿದೆ. ಜನವರಿ ತಿಂಗಳಲ್ಲಿ ಕಾಮಗಾರಿಗೆ ಚಾಲನೆ ದೊರೆಯಲಿದೆ” ಎಂದು ಮಾಹಿತಿ ನೀಡಿದರು.

“ಹಾರಂಗಿ ಅಚ್ಚುಕಟ್ಟು ಪ್ರದೇಶ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು. ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟು ಕಡಿಮೆ ಮಾಡಿ, ಪರಿಸರ ಸಂರಕ್ಷಣೆ ಮಾಡಿದಲ್ಲಿ ಕಾವೇರಿ ನದಿಯನ್ನು ಉಳಿಸಲುಕೊಳ್ಳಲು ಸಾಧ್ಯ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು” ಎಂದು ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ತುಂಗಭದ್ರಾ ಎಡದಂಡೆ ನಾಲೆಯ ಜಮೀನುಗಳಿಗೆ ಸಮರ್ಪಕ ನೀರು ಹರಿಸುವಂತೆ ಒತ್ತಾಯ

ತಲಕಾವೇರಿ ತುಲಾ ಸಂಕ್ರಮಣ ಸಮಯದಲ್ಲಿ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿ, ಕಾವೇರಿ ಮಾತೆಯನ್ನು ಪೂಜಿಸುವ ಮೂಲಕ ನಾಡಿಗೆ ಹಾಗೂ ಕೊಡಗಿಗೆ ಒಳಿತಾಗಲೆಂದು ಪ್ರಾರ್ಥಿಸಿರುವುದಾಗಿ ಹೇಳಿದರು.

ವಿಧಾನಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಹಾರಂಗಿ ನೀರು ಬಳಕೆದಾರರ ಸಹಕಾರ ಮಹಾಮಂಡಲದ ಅಧ್ಯಕ್ಷ ಚೌಡೇಗೌಡ, ಅಧೀಕ್ಷಕ ಎಂಜಿನಿಯರ್ ರಘುಪತಿ, ಹಾರಂಗಿ ಜಲಾಶಯದ ಇಇ ಐ ಕೆ ಪುಟ್ಟಸ್ವಾಮಿ, ತಹಶೀಲ್ದಾರ್ ಕಿರಣ್ ಗೌರಯ್ಯ, ಸಹಾಯಕ ಎಂಜಿನಿಯರ್ ಕಿರಣ್ ದೇವಯ್ಯ, ಸಿದ್ದರಾಜು, ಸೌಮ್ಯ, ಸಂಧ್ಯಾ, ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ತಾಲೂಕು ಘಟಕದ ಅಧ್ಯಕ್ಷ ವಿ ಪಿ ಶಶಿಧರ, ಕೂಡುಮಂಗಳೂರು ಗ್ರಾ ಪಂ ಅಧ್ಯಕ್ಷ ಭಾಸ್ಕರ ನಾಯ್ಕ್, ಹಾರಂಗಿ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಎಂಜಿನಿಯರ್‌ಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X