ಚಿಕ್ಕಮಗಳೂರು | ಮೂಲಸೌಕರ್ಯವನ್ನೇ ಕಾಣದ ಸಂಸೆ ಗ್ರಾಮ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

Date:

Advertisements

ಚಿಕ್ಕಮಗಳೂರು ಜಿಲ್ಲೆ, ಕಳಸ ತಾಲೂಕಿನ, ಸಂಸೆ ಗ್ರಾಮದ ಬಸೀಕಲ್ ಮಾರ್ಗವಾಗಿ ಹಾದು ಹೋಗುವ ತೋರಣಕಾಡು, ಕುಚಿಗೇರಿ, ಬೊಮ್ಮನಮಕ್ಕಿ, ಮುತ್ತಿನಕೊಂಡ, ದಂಟಗನಕೊಂಡ ಮುಂತಾದ ಗ್ರಾಮಗಳಲ್ಲಿ ಸುಮಾರು 250ಕ್ಕೂ ಹೆಚ್ಚು ಪರಿಶಿಷ್ಟ ಪಂಗಡದ ಜನರು ನೂರಾರು ವರ್ಷಗಳಿಂದ ವಾಸವಾಗಿದ್ದಾರೆ.

ಈ ಎಲ್ಲ ಕುಟುಂಬಗಳಿಗೆ ಮೂಲಭೂತ ಸವಲತ್ತುಗಳಾದ ಸಮರ್ಪಕ ರಸ್ತೆ, ಮೊಬೈಲ್ ನೆಟ್‌ವರ್ಕ್, ಕುಡಿಯುವ ನೀರು, ಸಮುದಾಯ ಭವನ ಹಾಗೂ ಅಂಗನವಾಡಿ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆ ಸೇರಿದಂತೆ ಯಾವುದೇ ಮೂಲ ಸೌಕರ್ಯಗಳಿಲ್ಲದೆ ಇಲ್ಲಿನ ಜನರು ವಂಚಿತರಾಗಿದ್ದಾರೆ.

ಸಂಸೆ ಗ್ರಾಮ 4

ತೋರಣಕಾಡು-ಕುಚಿಗೇರಿ- ಬೊಮ್ಮನಮಕ್ಕಿ ಮುತ್ತಿನಕೊಂಡ- ದಂಟಗನಕಾಡು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪಂಚಾಯಿತಿ ಕಚ್ಚಾ ರಸ್ತೆ ಇದ್ದು, ಈ ರಸ್ತೆಯು ಹೊಂಡ-ಗುಂಡಿಗಳಿಂದ ಕೂಡಿದೆ. ಈ ರಸ್ತೆಯಲ್ಲಿ ಸಂಚಾರ ಮಾಡುವುದೇ ಬಹಳ ದುಸ್ತರವಾಗಿರುತ್ತದೆ. ಈ ರಸ್ತೆಯ ವ್ಯಾಪ್ತಿಯಲ್ಲಿ ಅಳವಡಿಸಿದ್ದ, ಮೋರಿ ಪೈಪ್‌ಗಳು ಹಾಗೂ ತಡೆಗೋಡೆಗಳು ಹೆಚ್ಚಿನ ಮಳೆಯಿಂದ ಸಂಪೂರ್ಣವಾಗಿ ಕುಸಿತವಾಗಿವೆ.

Advertisements
ಸಂಸೆ ಗ್ರಾಮ 1

ಸ್ಥಳೀಯ ನಿವಾಸಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮಳೆಗಾಲದಲ್ಲಂತೂ ಈ ರಸ್ತೆಯು ಕೆಸರುಮಯವಾಗಿರುತ್ತದೆ. ತುರ್ತಾಗಿ ಆಸ್ಪತ್ರೆಗೆ ಹೋಗಬೇಕೆಂದರೂ ಕೂಡ ತುಂಬಾ ಕಷ್ಟವಾಗಿದೆ. ಈ ಸಮಯದಲ್ಲಿ ಯಾವುದೇ ಬಾಡಿಗೆ ವಾಹನದವರನ್ನು ಕರೆದರು ಯಾರೂ ಬರಲು ಒಪ್ಪುವುದಿಲ್ಲ. ದಿನನಿತ್ಯ ಈ ರಸ್ತೆಯಲ್ಲಿ ಸಂಚಾರ ಮಾಡುವ ಗ್ರಾಮಸ್ಥರಿಗೆ, ವೃದ್ಧರಿಗೆ ಬಹಳ ತೊಂದರೆಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಸಂಸೆ ಗ್ರಾಮ2

“ಕುಡಿಯುವ ನೀರಿನ ಸಮಸ್ಯೆಯು ತೀವ್ರವಾಗಿದ್ದು, ಮಳೆಗಾಲದಲ್ಲಿ ಕೆಸರು ಮಿಶ್ರಿತ ನೀರನ್ನು ಕುಡಿಯುವ ಪರಿಸ್ಥಿತಿ ಎದುರಾಗಿದೆ. ಸುಮಾರು 1 ಕಿಮೀ ದೂರದಿಂದ ಕುಡಿಯುವ ನೀರನ್ನು ಹೊತ್ತು ತರಬೇಕಾಗಿದೆ. ಇದರಿಂದಾಗಿ ಈ ಗ್ರಾಮದ ಎಲ್ಲ ಗ್ರಾಮಸ್ಥರಿಗೂ ತೊಂದರೆಯಾಗುತ್ತಿದೆ. ನೀರಿನ ಟ್ಯಾಂಕ್ ನಿರ್ಮಿಸಿ, ಪೈಪ್‌ಲೈನ್ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲು ಅದೆಷ್ಟೋ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು ಏನೂ ಪ್ರಯೋಜನವಾಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಸೆ ಗ್ರಾಮ 3

“ತೋರಣಕಾಡಿನಿಂದ ಕುಚಿಗೇರಿ, ಬೊಮ್ಮನಮಕ್ಕಿ, ಮುತ್ತಿನಕೊಂಡ, ದಂಟಗನಕೊಂಡ ಸಂಪರ್ಕ ಕಲ್ಪಿಸುವ ಕಚ್ಚಾ ರಸ್ತೆಯನ್ನು ತುರ್ತಾಗಿ ದುರಸ್ತಿ ಪಡಿಸಿ, ಕಾಂಕ್ರೀಟೀಕರಣಗೊಳಿಸಬೇಕು. ಈ ನಿಟ್ಟಿನಲ್ಲಿ ಸಂಬಂದಪಟ್ಟ ಅಧಿಕಾರಿಗಳು ಸೂಕ್ತಕ್ರಮ ಕೈಗೊಂಡು ನಮ್ಮ ಓಡಾಟಕ್ಕೆ ಅನೂಕೂಲ ಮಾಡಿಕೊಡಬೇಕು” ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಸಂಸೆ ಗ್ರಾಮ 5

ಈ ಸುದ್ದಿ ಓದಿದ್ದೀರಾ? ವಂಚನೆ ಪ್ರಕರಣ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಮನೆ ಮೇಲೆ ಪೊಲೀಸರ ದಾಳಿ

“ಅಧಿಕಾರಿಗಳು ಹಾಗೂ ಕ್ಷೇತ್ರದ ಶಾಸಕರು ಇಲ್ಲಿನ ಗ್ರಾಮಗಳ ಸಮಸ್ಯೆಗಳನ್ನು ಗಮನಿಸಿ ಆದಷ್ಟು ಬೇಗ ಪರಿಹರಿಸಿಕೊಡಬೇಕು” ಎಂದು ಸ್ಥಳೀಯರು ಒತ್ತಾಯಿಸಿದರು.

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X