ಗದಗ | ನಾಲ್ಕು ಕ್ಷೇತ್ರಗಳಲ್ಲಿ ಯಾರಿಗೆ ಹಿನ್ನಡೆ/ಮುನ್ನಡೆ?

Date:

Advertisements
  • ಗದಗ, ನರಗುಂದ, ಶಿರಹಟ್ಟಿ, ರೋಣ ಕ್ಷೇತ್ರಗಳ ಅಂಚೆ ಮತಗಳ ಎಣಿಕೆ ವಿಳಂಬ
  • 2018ರಲ್ಲಿ ಮೂರು ಕ್ಷೇತ್ರಗಳು ಬಿಜೆಪಿ ಪಾಲಾಗಿದ್ದರೆ, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದರು

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನ ಮೇ 13ರಂದು ರಾಜ್ಯದೆಲ್ಲೆಡೆ ಆರಂಭವಾಗಿದ್ದು, 2,615 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ಗೊತ್ತಾಗಲಿದೆ. ಗದಗ ಜಿಲ್ಲೆಯ ಗದಗ, ನರಗುಂದ, ಶಿರಹಟ್ಟಿ, ರೋಣ ಕ್ಷೇತ್ರದಲ್ಲಿ ಅಂಚೆ ಮತಗಳ ಎಣಿಕೆ ವಿಳಂಬವಾಗಿದೆ.

ಅಂಚೆ ಮತ ಎಣಿಕೆಯಲ್ಲಿ ಯಾರಿಗೆ ಮುನ್ನಡೆ?

ಅಂಚೆಮತಗಳಲ್ಲಿ ಗದಗ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಮುನ್ನಡೆ ಪಡೆದಿದ್ದು, ಶಿರಹಟ್ಟಿ ಬಿಜೆಪಿ ಅಭ್ಯರ್ಥಿ ಡಾ. ಚಂದ್ರು ಲಮಾಣಿ ಮುನ್ನಡೆ ಸಾಧಿಸಿದ್ದಾರೆ. ರೋಣ ಮತಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಿ.ಎಸ್ ಪಾಟೀಲ್ ಮುನ್ನಡೆಯಲ್ಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮತ ಎಣಿಕೆ ಕೇಂದ್ರದ ಬಳಿ ತಿಂಡಿ ವ್ಯವಸ್ಥೆ; ಕೋಪಗೊಂಡ ಜಿಲ್ಲಾಧಿಕಾರಿ

ಮೊದಲ ಸುತ್ತಿನಲ್ಲಿ ಕಾಂಗ್ರೆಸ್‌ ಮುನ್ನಡೆ

ಮೊದಲನೇ ಸುತ್ತಿನಲ್ಲಿ ರೋಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ ಎಸ್ ಪಾಟೀಲ್ 4928 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ.

ಗದಗ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಕೆ‌.ಪಾಟೀಲ್ ಕೂಡ ಮುನ್ನಡೆಯಲ್ಲಿದ್ದಾರೆ. ಶಿರಹಟ್ಟಿ ಬಿಜೆಪಿ ಅಭ್ಯರ್ಥಿ ಡಾ ಚಂದ್ರು ಲಮಾಣಿ 2,739 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ನರಗುಂದದಲ್ಲಿ ಮೊದಲನೇ ಸುತ್ತಿನಲ್ಲಿ 5279 ಮತ ಪಡೆದು ಯಾವಗಲ್ ಅವರು ಮುನ್ನಡೆಯಲ್ಲಿದ್ದಾರೆ.

ಎರಡನೇ ಸುತ್ತಿನ ವಿವರ

ಗದಗ, ಶಿರಹಟ್ಟಿ ಮತ್ರು ರೋಣ ಕ್ಷೇತ್ರದ 2ನೇ ಸುತ್ತು ಮುಕ್ತಾಯವಾಗಿದ್ದು, ರೋಣದಲ್ಲಿ 17157 ಮತ ಎಣಿಕೆ ಮುಕ್ತಾಯವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.ಪಾಟೀಲ 8534, ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿಗೆ 7487 ಮತಗಳು ಲಭಿಸಿವೆ.

ಶಿರಹಟ್ಟಿಯಲ್ಲಿ 19155 ಮತಗಳ ಎಣಿಕೆ ಮುಕ್ತಾಯವಾಗಿದೆ. ಬಿಜೆಪಿಯ ಚಂದ್ರು ಲಮಾಣಿ 8335, ಕಾಂಗ್ರೆಸ್ಸಿನ ಸುಜಾತಾ ದೊಡ್ಡಮನಿ 5473, ಪಕ್ಷೇತರ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ 4170 ಮತಗಳನ್ನು ಪಡೆದಿದ್ದಾರೆ.

2018ರಲ್ಲಿ ಮೂರು ಕ್ಷೇತ್ರಗಳು ಬಿಜೆಪಿ ಪಾಲಾಗಿದ್ದರೆ, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X