ರಾಜಸ್ಥಾನದ ಧೋಲ್ಪುರದಲ್ಲಿ ಆಟೋ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 12 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಧೋಲ್ಪುರದ ಸುನಿಪುರ್ ಗ್ರಾಮದ ಬಳಿಕ ಕರೌಲಿ-ಧೋಲ್ಪುರ್ ಹೆದ್ದಾರಿ NH-11Bಯಲ್ಲಿ ದುರ್ಘಟನೆ ಸಂಭವಿಸಿದೆ.
ಶನಿವಾರ ರಾತ್ರಿ, ಹೆದ್ದಾರಿಯಲ್ಲಿ ಆಟೋ ಮತ್ತು ಬಸ್ ಡಿಕ್ಕಿ ಹೊಡೆದುಕೊಂಡಿದ್ದು, ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ದುರ್ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿವೆ.
ಮೃತರಲ್ಲಿ ಎಂಟಿ ಮಂದಿ ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಬರೌಲಿಯಲ್ಲಿ ನಡೆದ ‘ಭಾತ್’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹಲವರು, ಆಟೋದಲ್ಲಿ ಹಿಂದಿರುಗುತ್ತಿದ್ದರು. ಈ ವೇಳೆ, ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ಉದ, ವಿಚಾರಣೆ ನಡೆಸುತ್ತಿದ್ದಾರೆ.