ಧಾರವಾಡ ಸಂಪಿಗೆ ನಗರದ ಬಳಿ ಆಟೋ ಮತ್ತು ಲಾರಿ ನಡುವೆ ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಟೋ ರೈಲ್ವೆ ನಿಲ್ದಾಣದ ಕಡೆಗೆ ಚಲಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಅಟೋದಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದು ಅವರನ್ನು ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿದೆ. ಆಟೋ ಚಾಲಕ ರಮೇಶ್ ಹಂಚಿನಮನಿ (35) ಮತ್ತು ಮರೆವ್ವ ಹಂಚಿನಮನಿ (55) ಅಪಘಾತದಲ್ಲಿ ಸಾವಿಗೀಡಾದ ದುರ್ದೈವಿಗಳು.
ಇದನ್ನು ಓದಿದ್ದೀರಾ? ಧಾರವಾಡ | ಭೀಕರ ಅಪಘಾತ: ಇಬ್ಬರ ದೇಹಗಳು ಛಿದ್ರ-ಛಿದ್ರ
ಈ ಕುರಿತು ಧಾರವಾಡ ಸಂಚಾರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.