ಹಾವೇರಿ | ಸ್ವಚ್ಛವಾಹಿನಿ ನೌಕರರಿಗೆ ಕೆಲಸ ನೀಡಿ ಘನತೆಯ ಬದುಕು ಖಾತ್ರಿಪಡಿಸಬೇಕು: ಎಂ ಬಿ ನಾಡಗೌಡ

Date:

Advertisements

ಗ್ರಾಮಗಳ ಸ್ವಚ್ಚತೆಯ ಜವಾಬ್ದಾರಿ ನಿರ್ವಹಿಸಿ ಗ್ರಾಮೀಣ ಜನತೆಯ ನೈರ್ಮಲ್ಯ ಕಾಪಾಡುತ್ತಿರುವ ಸ್ವಚ್ಛವಾಹಿನಿ ನೌಕರರಿಗೆ ಸರ್ಕಾರ ಕೆಲಸ ಒದಗಿಸಿ, ಘನತೆಯ ಬದುಕನ್ನು ಖಾತ್ರಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎಂ ಬಿ ನಾಡಗೌಡ ಒತ್ತಾಯಿಸಿದರು.

ಹಾವೇರಿ ಪಟ್ಟಣದ ಸರ್ಕಾರಿ ನೌಕರರ ಸಂಘದ ಸಭಾ ಭವನದಲ್ಲಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತ ಸ್ವಚ್ಛವಾಹಿನಿ ನೌಕರರ ಜಿಲ್ಲಾ ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಪಂಚಾಯತ್ ಸಹಾಯಕ ನಿರ್ದೇಶಕ ವಿ ಕೆ ಶಿವಲಿಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.

Advertisements

“ಕಸ ವಿಲೇವಾರಿ ಮಾಡುವ ಕಾರ್ಮಿಕರಿಗೆ ಕನಿಷ್ಠ ಮೂಲಸೌಕರ್ಯಗಳನ್ನು ಒದಗಿಸದೇ ಶೋಷಣೆಗೆ ಒಳಪಡಿಸುತ್ತಿರುವುದು ಖಂಡನೀಯ. ಕೂಡಲೇ ಸರ್ಕಾರ ತರಬೇತಿ ಪಡೆದ ಎಲ್ಲ ಸ್ವಚ್ಛವಾಹಿನಿ ನೌಕರರಿಗೆ ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನೀಡಬೇಕು. ಪ್ರತಿ ತಿಂಗಳು ವೇತನ ಪಾವತಿ ಮಾಡಬೇಕು” ಎಂದು ಎಂ ಬಿ ನಾಡಗೌಡ ಆಗ್ರಹಿಸಿದರು.

ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ಸಮಾಜದ ನೈರ್ಮಲ್ಯ ಕಾಪಾಡುವ ಸ್ವಚ್ಛವಾಹಿನಿ ಸಿಬ್ಬಂದಿಗಳ ಜೀವನವೂ ಸಹ ನಮ್ಮ ನಾಗರಿಕ ಸಮಾಜದಲ್ಲಿ ಘನತೆಯಿಂದ ಕೂಡಿರಬೇಕು. ಆದರೆ ಸರ್ಕಾರಗಳು ಕನಿಷ್ಠ ಮೂಲಸೌಲಭ್ಯಗಳನ್ನು ಒದಗಿಸದಿರುವುದು ನಾಚಿಕೆಗೇಡಿನ ಸಂಗತಿ. ಎಲ್ಲ ನೌಕರರು ಸಂಘಟಿತರಾಗಿ ಐಕ್ಯತೆಯಿಂದ ಹೋರಾಡಿ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಮುಂದಾಗಬೇಕು” ಎಂದು ಕರೆ ನೀಡಿದರು.

ಗ್ರಾಮ ಪಂಚಾಯಿತ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಂದಾನೆಪ್ಪ ಹೆಬಸೂರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾವೇಶದಲ್ಲಿ ರಾಜ್ಯ ಮುಖಂಡ ಡಿ.ಎಂ ಮರಿಯಪ್ಪ, ಸಂಘಟನೆಯ ಜಿಲ್ಲಾ ಮುಖಂಡ ಸುಭಾಸ್ ಸೊಟ್ಟಪ್ಪನವರ, ಶಿಲ್ಪಾ ಶೇಷಗಿರಿ, ಗೀತಾ ಬಾಗಿಲದ, ರಚನಾ ಎಚ್, ಫಕ್ಕಿರೇಶ ಹಕ್ಕಿಮರೆಣ್ಣನವರ ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲೆಯ ವಿವಿಧ ತಾಲೂಕುಗಳ ನೂರಾರು ಸ್ವಚ್ಛವಾಹಿನಿ ಸಿಬ್ಬಂದಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X