ಧಾರಾಕಾರ ಸುರಿದ ಮಳೆಗೆ ಮನೆ ಕುಸಿದು ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮರಣ ಹೊಂದಿದ ಘಟನೆ ಧಾರವಾಡ ಜಿಲ್ಲೆ ನವಲಗುಂದದ ಹಣಸಿ ಗ್ರಾಮದಲ್ಲಿ ನಡೆದಿದೆ.
ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಪ್ರಯೋಜನವಾಗದೆ ಸಾವನ್ನಪ್ಪಿದರು. ಮಂಗಳಾ ಪಾಟೀಲ್ ಮೃತ ದುರ್ದೈವಿ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಧಾರವಾಡ | ಭಾರೀ ಮಳೆಗೆ ಕೊಚ್ಚಿಹೋದ ಸೇತುವೆ; ಎಚ್ಚರಗೊಳ್ಳುವರೇ ಜನಪ್ರತಿನಿಧಿಗಳು?
ಮಂಗಳಾ ಅವರ ಸೊಸೆ ಸುವರ್ಣ ಪಾಟೀಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.