ಅಸಂಘಟಿತ ಕಾರ್ಮಿಕರು ತಮ್ಮ ಸೌಲಭ್ಯಗಳನ್ನು ಸುಸೂತ್ರವಾಗಿ ಪಡೆಯಲು ಹಾಗೂ ಸೌಲಭ್ಯ ಹೆಚ್ಚಳಕ್ಕಾಗಿ ಸರ್ಕಾರದ ಮೇಲೆ ಒತ್ತಡ ತರಲು ಸಂಘಟಿತರಾಗಬೇಕು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.
ಭಾನುವಾರ ಹಂಚು ಕಾರ್ಮಿಕರ ಭವನದಲ್ಲಿ ನಡೆದ ಅಸಂಘಟಿತ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ನೋಂದಣಿ ಮಾಹಿತಿ ಕುರಿತು ಆಯೋಜಿಸಿದ ಅಸಂಘಟಿತ ಕಾರ್ಮಿಕರ ಸಮಾವೇಶ ಉದ್ಘಾಟಿಸಿ ಮಾತನಾಡಿ, ʼಸಿಐಟಿಯು ನಡೆಸಿದ ಹಲವು ಸಾರ್ವತ್ರಿಕ ಮುಷ್ಕರದ ಬಳಿಕ ಸಾರಿಗೆ ನೌಕರರಿಗೆ ಕಲ್ಯಾಣ ಮಂಡಳಿ ರಚನೆಯಾಗಿದೆʼ ಎಂದರು.
ಸಿಐಟಿಯು ಸಂಚಾಲಕ ಚಂದ್ರಶೇಖರ ವಿ. ಅವರು ಕಾರ್ಮಿಕರ ನೋಂದಣಿ ಮತ್ತು ಸೌಲಭ್ಯಗಳ ಕುರಿತು ಮಾಹಿತಿ ನೀಡಿ, ಸೌಲಭ್ಯಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಆಟೋ ರಿಕ್ಷಾ ಮತ್ತು ವಾಹನ ಚಾಲಕರ ಸಂಘದ ಅಧ್ಯಕ್ಷ ರಮೇಶ್ ವಿ., ಸಿಐಟಿಯು ಮುಖಂಡ ಎಚ್ ನರಸಿಂಹ ಮಹಾಬಲ ವಡೇರಹೋಬಳಿ ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಮಂಗಳೂರು | ಸಮುದ್ರದಲ್ಲಿ ಈಜಲು ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು
ಸಮಾವೇಶದ ಅಧ್ಯಕ್ಷತೆ ಕೆ.ಶಂಕರ್ ವಹಿಸಿದ್ದರು. ಆಟೋ ರಿಕ್ಷಾ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ದೇವಾಡಿಗ ಸ್ವಾಗತಿಸಿದರು ಮಂಜುನಾಥ ಶೋಗನ್ ವಂದಿಸಿದರು.
