ತುಮಕೂರು | ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತೊಗೆಯಲು ಲೋಕಾಯುಕ್ತ ಬದ್ದ : ಬಿ. ವೀರಪ್ಪ

Date:

Advertisements

ಪ್ರಜಾ ಪ್ರಭುತ್ವದ ಬಹುದೊಡ್ಡ ಪಿಡುಗಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಲು ಲೋಕಾಯುಕ್ತ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಹೇಳಿದರು.

ತುಮಕೂರು ನಗರದ ಪರಿವೀಕ್ಷಣಾ ಮಂದಿರದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ 3 ದಿನಗಳ ಕಾಲ ಲೋಕಾಯುಕ್ತ ಕುಂದು-ಕೊರತೆ ಸಭೆ, ಬಾಕಿ ದೂರು ಅರ್ಜಿಗಳ ವಿಲೇವಾರಿ, ಕಾನೂನು ಅರಿವು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ದೂರುಗಳು ಜಿಲ್ಲೆಯಲ್ಲಿ ದಾಖಲಾಗಿವೆ ಎಂದು ತಿಳಿಸಿದರು.

 ತುಮಕೂರು ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಅಕ್ಟೋಬರ್ 18ರಂದು ನಡೆದ ಸಾರ್ವಜನಿಕರ ಅಹವಾಲು ಸಭೆಯಲ್ಲಿ ಸಲ್ಲಿಕೆಯಾಗಿದ್ದ 299 ಹೊಸ ದೂರುಗಳಿಗೆ ಸಂಬಂಧಿಸಿದಂತೆ ಸೂಕ್ತ ವಿಚಾರಣೆ ನಡೆಸಿ 80 ಪ್ರಕರಣಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಜಿಲ್ಲೆಗೆ ಸಂಬಂಧಪಟ್ಟ ಬಾಕಿ ಇದ್ದ 183 ಹಳೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ಟೋಬರ್ 19ರಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ದೂರುದಾರರು ಮತ್ತು ಪ್ರತಿ ದೂರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಿ 71 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು ಎಂದು ತಿಳಿಸಿದರು.

Advertisements

 ಗುಬ್ಬಿ ಪಟ್ಟಣದ ಮಳೆ ನೀರಿನಿಂದ ನಿರಾಶ್ರಿತರಾಗಿದ್ದ ಹಂದಿಜೋಗರ ಕಾಲೋನಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿ ತಾಲೂಕು ಆಡಳಿತದಿಂದ ಗುರುತಿಸಿರುವ ಸಾತೇನಹಳ್ಳಿ ಪ್ರದೇಶಕ್ಕೆ ತೆರಳುವಂತೆ ನಿವಾಸಿಗಳ ಮನವೊಲಿಸಲಾಗಿದೆ. ನಂತರ ನಿರಾಶ್ರಿತರಿಗಾಗಿ ತಾಲ್ಲೂಕು ಆಡಳಿತದಿಂದ ನಿರ್ಮಿಸಿರುವ ತಾತ್ಕಾಲಿಕ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಲಾಗಿದೆ ಎಂದರು.

ಸರ್ಕಾರಿ ಇಲಾಖಾಧಿಕಾರಿ-ಸಿಬ್ಬಂದಿಗಳು ಸಾರ್ವಜನಿಕರಿಗೆ ಸಕಾಲದಲ್ಲಿ ಸರ್ಕಾರಿ ಸೌಲಭ್ಯಗಳನ್ನು ಒದಗಿಸಬೇಕು. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು. ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾರ್ವಜನಿಕರು ಕೂಡ ಬದಲಾಗಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯೆ ಕಾರ್ಯದರ್ಶಿ ನೂರುನ್ನಿಸಾ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ತುಮಕೂರು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ವಿ. ಲಕ್ಷ್ಮೀನಾರಾಯಣ, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಸೇರಿದಂತೆ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X