ಸುರತ್ಕಲ್ ಸಮೀಪದ ಮುಕ್ಕದ ಖಾಸಗಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸಮುದ್ರದಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆಯ ತಿಲಕ್ (21) ಎಂದು ತಿಳಿದು ಬಂದಿದೆ
ಸುರತ್ಕಲ್ ಸಮೀಪದ ಇಡ್ಯಾ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವಿದ್ಯಾರ್ಥಿ ಭಾನುವಾರ ಸಂಜೆ ವಾಯು ವಿಹಾರಕ್ಕೆಂದು ತೆರಳಿದ್ದರು. ಇತರ ವಿದ್ಯಾರ್ಥಿಗಳ ಜತೆ ಸಮುದ್ರದಲ್ಲಿ ಈಜಾಡಲು ಇಳಿದ ವೇಳೆ ರಭಸದ ಅಲೆಗೆ ಸಿಲುಕಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಸಹಕಾರದಿಂದ ಮೃತದೇಹ ಹೊರ ತೆಗೆಯಲಾಗಿದೆ.
