ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಬಗ್ಗೆ ಯೋಚಿಸಿಲ್ಲ, ಮುಂದೆ ಏನಾಗುತ್ತೋ ಗೊತ್ತಿಲ್ಲ: ಯೋಗೇಶ್ವರ್

Date:

Advertisements

ಚನ್ನಪಟ್ಟಣ ಉಪ ಚುನಾವಣೆಗೆ ಸ್ಪರ್ಧಿಸುವುದು ಖಚಿತ. ಬಿಜೆಪಿ ಪಕ್ಷದಲ್ಲಿ ಹಲವು ವರ್ಷಗಳ ಕಾಲ ದುಡಿದಿದ್ದೇನೆ. ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಸಿ ಪಿ ಯೋಗೇಶ್ವರ್‌ ಸ್ಪಷ್ಟಪಡಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.

“ಈ ಭಾಗದಲ್ಲಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದೇನೆ. ಬಿಜೆಪಿಯಿಂದಲೇ ಸ್ಪರ್ಧಿಸಬೇಕೆಂದು ಬಯಸಿದ್ದೇನೆ” ಎಂದರು.

Advertisements

“ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಬಗ್ಗೆ ಈ ಕ್ಷಣದವರೆಗೆ ನಿರ್ಧರಿಸಿಲ್ಲ. ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ. ನಾಳೆ ನಮ್ಮ ಕಾರ್ಯಕರ್ತರ ಜೊತೆ ಚರ್ಚಿಸಿ, ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಬಿಜೆಪಿಯಿಂದ ಸ್ಪರ್ಧಿಸಲು ನನ್ನ ಮೊದಲ ಆದ್ಯತೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

“ನಾನಿನ್ನೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ.‌ ಬಿಜೆಪಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅನುಕೂಲವಾಗಲೆಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ಹೇಳಿದರು.

ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಾವು ಪರಸ್ಪರ ವಿರೋಧಿಸಿಕೊಂಡೇ ಬೆಳೆದವರು. ಇದಕ್ಕೆ ಜೆಡಿಎಸ್‌ ಕಾರ್ಯಕರ್ತರ ವಿರೋಧ ಕೂಡ ಇದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X