ಮೈಸೂರು | ಯುದ್ಧ ಬೇಡ, ಬುದ್ಧ ಬೇಕು; ನೇರಳೆ ಗ್ರಾಮದಲ್ಲಿ ‘ಧಮ್ಮ ಪಯಣ’

Date:

Advertisements

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ನೇರಳೆ ಗ್ರಾಮದಲ್ಲಿ ಧಮ್ಮ ಪಯಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಾವಿರಕ್ಕೂ ಅಧಿಕ ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಎರಡು ಕಿಲೋ ಮೀಟರ್‌ಗಿಂತಲೂ ಹೆಚ್ಚು ದೂರ ಧಮ್ಮ ದೀಪ ಹಿಡಿದು ಕ್ರಮಿಸಿದರು.

ಗ್ರಾಮದ ಯಜಮಾನರು, ಮುಖಂಡರು, ಮಹಿಳೆಯರು, ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು, ಗ್ರಾಮದ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Advertisements
1002104535

ಮಾತೆ ಗೌತಮಿ ಬಂತೇಯವರ ಸಾನಿಧ್ಯದಲ್ಲಿ ಈ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಾಮವು ಸುಮಾರು 2500 ಮೀಟರ್ ಧಮ್ಮ ಧ್ವಜ ಮತ್ತು ಧಮ್ಮ ತೋರಣಗಳಿಂದ ಕಂಗೊಳಿಸುತ್ತಿತ್ತು.

ಪ್ರತಿಯೊಂದು ಮನೆಯಲ್ಲಿಯೂ ಬುದ್ಧ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ದೀಪವನ್ನು ಬೆಳಗುವುದರ ಮೂಲಕ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಡಾ ಬಿ ಆರ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದರು.

ಡಾ ಅಂಬೇಡ್ಕರ್ ರವರು ಬೌದ್ಧ ಧರ್ಮ ಸ್ವೀಕರಿಸಿದ 68ನೇ ವರ್ಷದ ಸವಿ ನೆನಪಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ಅಂಬೇಡ್ಕರ್ ಅವರ ಮಾರ್ಗದಲ್ಲಿ ನಾವೆಲ್ಲರೂ ನಡೆಯಬೇಕಿದೆ. ಅವರ ಆಶಯ ಮತ್ತು ಚಿಂತನೆಗಳ ಗುರಿಯತ್ತ ನಾವು ಸಾಗಬೇಕಿದೆ ಎಂದರು.

1002104536

ಚಿಂತಕ ಮಲ್ಕುಂಡಿ ಮಹದೇವಸ್ವಾಮಿ ಮಾತನಾಡಿ, ಬುದ್ದನ ಶಾಂತಿ ಮತ್ತು ಮೈತ್ರಿ ಇಂದಿನ ಜಗತ್ತಿಗೆ ಅವಶ್ಯಕವಾಗಿದ್ದು ನಮಗೆ ಯುದ್ಧ ಬೇಡ, ಬುದ್ಧ ಬೇಕು. ಇದನ್ನರಿತು ಸರ್ವ ಸಮಾಜಗಳು ಸಹಬಾಳ್ವೆಯಿಂದ ಜೀವನ ನಡೆಸಬೇಕು. ಸಮಾನತೆಯ ಚಿಂತನೆಗಳನ್ನು ಬಿತ್ತಿದ ಮಹನೀಯರನ್ನು ನೆನೆಯುವ ಅನಿವಾರ್ಯ ಇಂದಿನ ಯುವ ತಲೆಮಾರಿಗೆ ಅತ್ಯವಶ್ಯಕವಾಗಿದೆ ಎಂದರು.

ಧಮ್ಮ ನಡಿಗೆಯಲ್ಲಿ ಮಾತೆ ಗೌತಮಿಯವರು ಪಂಚಶೀಲಗಳ ಮ‌ಹತ್ವವನ್ನು ಬೋಧಿಸಿದರು. ಮಲ್ಲಳ್ಳಿ ನಾರಾಯಣ, ಕುಡ್ಲಾಪುರ ವಾಸು, ಉಪಾಸಕ, ಉಪಾಸಕಿಯರು, ಬಸವಟ್ಟಿಗೆ ಗ್ರಾಮಸ್ಥರು ಧಮ್ಮ ದೀಪವನ್ನು ಆಹ್ವಾನಿಸಿ ಜೊತೆಗೂಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X