ಶಿರಾ | ಗಂಗಾ ಕಲ್ಯಾಣ ಯೋಜನೆಯನ್ನು ರೈತರು ಸದ್ಬಳಕೆ ಮಾಡಿಕೊಳ್ಳಿ : ಟಿ.ಬಿ.ಜಯಚಂದ್ರ

Date:

Advertisements

ಗಂಗಾ ಕಲ್ಯಾಣ ಯೋಜನೆಯೂ ರೈತರಿಗೆ ವರದಾನವಾಗಿದ್ದು, ಕೊಳವೆ ಬಾವಿಗಳನ್ನು ಕೊರೆಸಲು ಸಾಧ್ಯವಾಗದ ರೈತರಿಗೆ ಸರ್ಕಾರದಿಂದಲೇ ಕೊಳವೆ ಬಾವಿ ಕೊರೆಸಿ ಪಂಪು ಮೋಟಾರ್‌ಗಳನ್ನು ಉಚಿತವಾಗಿ ನೀಡುತ್ತಿದೆ. ಈ ಯೋಜನೆಯಡಿ ಸವಲತ್ತು ಪಡೆದ ರೈತರು ಇದರ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ಶಿರಾ ನಗರದ ಶ್ರೀ ವಿವೇಕಾನಂದ ಕ್ರೀಡಾಂಗಣದ ಆವರಣದಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ 2020-21 ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ ಕೊಳವೆಬಾವಿಗಳನ್ನು ಕೊರೆಯಲಾಗಿರುವ 21 ಫಲಾನುಭವಿಗಳಿಗೆ ಪಂಪು ಮೋಟಾರ್ ಹಾಗೂ ಇತರೆ ಪೂರಕ ಸಾಮಾಗ್ರಿಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು, ರೈತರು ಆರ್ಥಿಕವಾಗಿ ಸಧೃಡರಾಗಲಿ ಎಂಬ ಉದ್ದೇಶದಿಂದ ಸರ್ಕಾರದ ವತಿಯಿಂದ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿ ಪಂಪು ಮೋಟಾರ್‌ಗಳನ್ನು ನೀಡುತ್ತಿದ್ದು, ಕರ್ನಾಟಕ ಸರ್ಕಾರದಿಂದ ಪಾರದರ್ಶಕವಾಗಿ ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಗಂಗಾ ಕಲ್ಯಾಣ ಯೋಜನೆಯಡಿ ಪ.ಜಾತಿಯ ಫಲಾನುಭವಿಗಳಿಗೆ ಉತ್ತಮ ಗುಣಮಟ್ಟದ ಪಂಪು ಮೋಟಾರ್‌ಗಳನ್ನು ನೀಡಲಾಗುತ್ತಿದೆ. ಇದರಿಂದ ರೈತರು ನೀರಾವರಿ ಪ್ರದೇಶಗಳಲ್ಲಿ ಬೆಳೆಯಬಹುದಾದ ವಿವಿಧ ಬೆಳೆಗಳನ್ನು ಬೆಳೆದು ಉತ್ತಮ ಲಾಭ ಗಳಿಸಬಹುದು ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಡಿ.ಜಯರಾಮಣ್ಣ, ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಎಸ್.ಎಂ.ರಾಜಶೇಖರ್, ನಗರಸಭೆ ಅಧ್ಯಕ್ಷ ಜೀಷಾನ್ ಮೊಹಮದ್, ಉಪಾಧ್ಯಕ್ಷ ಲಕ್ಷ್ಮೀಕಾಂತ್, ನಗರಸಭೆ ಸದಸ್ಯರಾದ ಬಿ.ಎಂ.ರಾಧಾಕೃಷ್ಣ, ಆಶ್ರಯ ಸಮಿತಿ ಸದಸ್ಯ ವಾಜರಹಳ್ಳಿ ರಮೇಶ್, ಬಗರ್‌ಹುಕುಂ ಸಮಿತಿ ಸದಸ್ಯ ಮದ್ದಕ್ಕನಹಳ್ಳಿ ತಿಪ್ಪೇಸ್ವಾಮಿ, ಮಾಜಿ ತಾ.ಪಂ. ಸದಸ್ಯ ಪಿ.ಬಿ.ನರಸಿಂಹಯ್ಯ, ಕೆಪಿಸಿಸಿ ಸದಸ್ಯ ಕೋಟೆ ಲೋಕೇಶ್ ಸೇರಿದಂತೆ ಹಲವರು ಹಾಜರಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X