ಕ್ಷುಲ್ಲಕ ಕಾರಣಕ್ಕೆ ಐವರು ಸೇರಿ ಓರ್ವನಿಗೆ ಚಾಕುವಿನಿಂದ ಇರಿದ ಘಟನೆ ರವಿವಾರ ಧಾರವಾಡ ಜಿಲ್ಲೆಯ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ವಿನಾಯಕ ಚಿತ್ರಗಾರ (21) ಹಳೇಹುಬ್ಬಳ್ಳಿಯ ನಿವಾಸಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಕಾರಣ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೀಪಕ, ಬಬ್ಲೂ, ಸಮೀರ, ಇರ್ಫಾನ್ ಮತ್ತಿತರರು ಹಲ್ಲೆ ಮಾಡಿದ ಆರೋಪಿಗಳೆಂದು ತಿಳಿದು ಬಂದಿದೆ.
ಒಂದು ವಾರದ ಹಿಂದೆ ವಿನಾಯಕ ಹಾಗೂ ಸಮೀರ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ ಆಕ್ರೋಶಗೊಂಡ ಸಮೀರ ಮತ್ತು ಇತರರು ವಿನಾಯಕನಿಗೆ ಚಾಕುವಿನಿಂದ ಇರಿದಿದ್ದು, ಪೊಲೀಸರು ಸಮೀರ್ ಅನ್ನು ಬಂಧಿಸಿದ್ದಾರೆ. ಇನ್ನುಳಿದವರಿಗಾಗಿ ಹುಡುಕುತ್ತಿದ್ದಾರೆ.
ಇದನ್ನು ಓದಿದ್ದೀರಾ? ಧಾರವಾಡ | ಮೂಢನಂಬಿಕೆಯಿಂದ ಹೆಣ್ಣು ಭ್ರೂಣ ಹತ್ಯೆ ಹೆಚ್ಚಾಗುತ್ತಿವೆ: ನ್ಯಾ. ಪರಶುರಾಮ ದೊಡ್ಡಮನಿ
ಈ ಕುರಿತು ಹಳೇಹುಬ್ಬಳ್ಳಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.