ಮಂಡ್ಯ | ಜಾತಿ ಜನಗಣತಿ ವರದಿ ಅಂಗೀಕರಿಸಿ, ಶೀಘ್ರ ಅನುಷ್ಠಾನಗೂಳಿಸಿ: ಗುರುಪ್ರಸಾದ್ ಕೆರಗೋಡು ಆಗ್ರಹ

Date:

Advertisements

ರಾಜ್ಯ ಸರ್ಕಾರವು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ, ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಜನಗಣತಿ ವರದಿ ಸ್ವೀಕರಿಸಿದ್ದನ್ನು ದಲಿತ ಸಂಘರ್ಷ ಸಮಿತಿ ಸ್ವಾಗತಿಸಿ, ಅಭಿನಂದಿಸುತ್ತದೆ. ಜತೆಗೆ ಕೂಡಲೇ ಜಾತಿ ಜನಗಣತಿ ವರದಿ ಅಂಗೀಕರಿಸಿ, ಶೀಘ್ರ ಅನುಷ್ಠಾನಗೂಳಿಸಬೇಕು ಎಂದು ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಒತ್ತಾಯಿಸಿದರು.

ಮಂಡ್ಯ ನಗರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಜಾತಿಗಣತಿ ವರದಿ ಅಂಗೀಕರಿಸಿ ಕೂಡಲೇ ಅನುಷ್ಠಾನಗೊಳಿಸುವಂತೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಬಳಿಕ ದಲಿತ, ಹಿಂದುಳಿದ ವರ್ಗಗಳ ಮೀಸಲಾತಿ ಮಿತಿ ಪ್ರಮಾಣವನ್ನು ಶೇ.50 ರಿಂದ ಶೇ.75ಕ್ಕೆ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

“ರಾಜ್ಯದ ಜನಸಂಖ್ಯೆಯ ಬಹುಭಾಗವಾಗಿರುವ ಆದಿವಾಸಿಗಳು, ಅಲೆಮಾರಿಗಳು, ದಲಿತರು, ಹಿಂದುಳಿದವರು ಅಲ್ಪಸಂಖ್ಯಾತರು ಮುಂತಾದ ಶೋಷಿತ ಸಮುದಾಯಗಳು ಹಲವು ದಶಕಗಳಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತ ಬಂದಿದ್ದವು. ಆದರೆ ಜಾತಿ ಕೇಂದ್ರಿತ ಪಕ್ಷ ರಾಜಕಾರಣವು ಈ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಸ್ಥಿತಿಗತಿಗಳನ್ನು ಉತ್ತಮಪಡಿಸುವ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದವು” ಎಂದರು.

Advertisements

“ಸಮಾಜದಲ್ಲಿ ಅಸಮಾನತೆಯ ಕಂದಕಗಳು ಮತ್ತಷ್ಟು ಹೆಚ್ಚಾಗುತ್ತಲೇ ಬರುತ್ತಿವೆ. ಈ ನಿಟ್ಟಿನಲ್ಲಿ ‘ಸಾಮಾಜಿಕ ನ್ಯಾಯʼದ ಗುರಿಗಳನ್ನು ತಲುಪಲು ಕಾಲಕಾಲಕ್ಕೆ ಜಾತಿ ಜನಗಣತಿಯ ನಿಖರ ವಿವರಗಳನ್ನು ಆಧರಿಸಿ ಮೀಸಲಾತಿ ಹೆಚ್ಚಳ ಹಾಗೂ ಹಿಂದುಳಿದ ದುರ್ಬಲ ತಳಸಮುದಾಯಗಳ ಉನ್ನತಿಗಾಗಿ ಇನ್ನಿತರ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸುವುದು ಅನಿವಾರ್ಯ. ಈ ಕೊರತೆಯನ್ನು ತಮ್ಮ ಸರ್ಕಾರವು ನೀಗಿಸಲೊರಟಿರುವುದು ನಿಜಕ್ಕೂ ಅಭಿನಂದನಾರ್ಹವಾದುದು” ಎಂದರು.

“ಜಾತಿ ಜನಗಣತಿ ವರದಿ ಸ್ವೀಕಾರಗೊಂಡ ಕೂಡಲೇ ಕೆಲವು ಪಟ್ಟಭದ್ರ ಜಾತಿವಾದಿ ವ್ಯಕ್ತಿಗಳು ಹಾಗೂ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ತೀವ್ರ ಅಸಮಧಾನ ಹೊರಹಾಕಿ ವಿರೋಧ ವ್ಯಕ್ತಪಡಿಸುತ್ತಿರುವುದು ಕಳವಳಕಾರಿ ಸಂಗತಿ. ಈ ಪಟ್ಟಭದ್ರ ಜಾತಿವಾದಿಗಳು ಜಾತಿ ಜನಗಣತಿ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವುದು” ಖಂಡನೀಯ ಎಂದರು.

“ಸಾಮಾಜಿಕ ನ್ಯಾಯ ವಿರೋಧಿಯಾದ ಅಸಮಾಧಾನಗಳನ್ನು, ವಿರೋಧ ಪ್ರತಿಭಟನೆಗಳನ್ನು ತಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸದೆ ‘ಸಾಮಾಜಿಕ ನ್ಯಾಯ’ದ ಪರವಾಗಿ ದೃಢ ನಿಲುವು ತಾಳಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಗೌರಿ ಹಂತಕರಿಗೆ ಸನ್ಮಾನ; ಜಾಮೀನು ವಜಾಕ್ಕೆ ಆಗ್ರಹ

“ಜಾತಿ ಜನಗಣತಿ ವರದಿಯ ಅಂಕಿ ಅಂಶಗಳ ಪ್ರಕಾರ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಹಾಗೂ ಇತರ ಹಿಂದುಳಿದ ವರ್ಗಗಳ ಈಗಿರುವ ಶೇ.50ರಷ್ಟು ಶೈಕ್ಷಣಿಕ, ಔದ್ಯೋಗಿಕ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದರ ಮೂಲಕ ಕರ್ನಾಟಕ ರಾಜ್ಯದ ‘ಸಾಮಾಜಿಕ ನ್ಯಾಯ’ದ ಪರಂಪರೆಯನ್ನು ತಾವು ಮತ್ತು ತಮ್ಮ ಸರ್ಕಾರ ಮತ್ತೊಮ್ಮೆ ಎತ್ತಿ ಹಿಡಿದು ದೇಶಕ್ಕೇ ಮಾದರಿ ಆಡಳಿತ ನೀಡಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹುಲ್ಕೆರೆ ಮಹಾದೇವ, ಕೆ ನಾಗರಾಜ್, ವೈ ರಾಜಶೇಖರ್, ಬಿ ಜೆ ನಾಗರಾಜ್, ಎಂ ಮಹದೇವಪ್ಪ, ಸೋಮಶೇಖರ್ ಹೆಚ್ ಪಿ, ಮಂಚಯ್ಯ ಚಂದ್ರಶೇಖರ್ ಸೇರಿದಂತೆ ಮೊದಲಾದವರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X