ಮೈಸೂರು | ದಸರಾ ಗೊಂಬೆ ಕೂರಿಸುವ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Date:

Advertisements

ಮೈಸೂರು ನಗರದ ರಾಮಾನುಜ ರಸ್ತೆಯಲ್ಲಿರುವ ನಮೋ ಯೋಗ ಭವನದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ಆಯೋಜನೆ ಮಾಡಿದ್ದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮನೆ ಮನೆ ಗೊಂಬೆ ಕೂರಿಸುವ ಸ್ಪರ್ಧೆ ನಡೆಯಿತು.

ಸ್ಪರ್ಧಿಸಿದ ಎಲ್ಲ ಸ್ಪರ್ಧಾಳುಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಹಿರಿಯ ಸಮಾಜ ಸೇವಕ
ಕೆ ರಘುರಾಮ್ ವಾಜಪೇಯಿ, ಸಂಸ್ಕೃತಿ ಮತ್ತು ಪರಂಪರೆ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ. ಪ್ರತಿಯೊಬ್ಬರು ಅದಕ್ಕಾಗಿ ಶ್ರಮಿಸಬೇಕು. ಸಂಪ್ರದಾಯದ ರಕ್ಷಣೆಗಾಗಿ ಪ್ರತಿಯೊಬ್ಬರು ಒಗ್ಗಟ್ಟಾಗಿ ಕಲಿತು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು ಎಂದರು.

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್ ಮಾತನಾಡಿ, ನವರಾತ್ರಿಯು ಮೈಸೂರು ಪರಂಪರೆಯಲ್ಲಿ ಅತ್ಯಂತ ಪವಿತ್ರವಾದದ್ದು. ದಸರಾ ಗೊಂಬೆ ಪ್ರದರ್ಶನಕ್ಕೆ ಅತ್ಯಂತ ಮಹತ್ವವಿದೆ. ಪಟ್ಟದ ಗೊಂಬೆಗಳನ್ನು ಲಕ್ಷ್ಮಿನಾರಾಯಣ ಸ್ವರೂಪದಲ್ಲಿ ಪೂಜಿಸಿ ಪುರಾಣ ಪುಣ್ಯಕಥೆಗಳನ್ನು ಗೊಂಬೆಗಳ ಮೂಲಕ ರೂಪಕವಾಗಿ ಪ್ರಚುರಪಡಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವುದೇ ಇದರ ಮೂಲ ಉದ್ದೇಶ ಎಂದರು.

Advertisements

ಕಾಂಗ್ರೆಸ್ ಮುಖಂಡ ಎನ್ ಎಂ ನವೀನ್ ಕುಮಾರ್ ಮಾತನಾಡಿ, ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ನಮ್ಮ ಸಂಸ್ಕಾರ, ಸಂಸ್ಕೃತಿ ಹಾಗೂ ನಮ್ಮ ಮೈಸೂರಿನ ಹಿರಿಮೆ ಹೆಚ್ಚಿಸುತ್ತದೆ ಎಂದು ಶುಭ ಹಾರೈಸಿದರು.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಗೌರಿ ಲಂಕೇಶ್ ಕೊಲೆ ಪಾತಕರಿಗೆ ಸನ್ಮಾನ; ಎದ್ದೇಳು ಕರ್ನಾಟಕದಿಂದ ಪ್ರತಿಭಟನೆ

ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ಎನ್ ಐ ಇ ಕಾಲೇಜಿನ ಪ್ರೊಫೆಸರ್ ಡಾ ಸಿ ಕೆ ವನಮಾಲ, ಅಂಬಾ ಭವಾನಿ ಸಮಾಜ ಮಹಿಳಾ ಅಧ್ಯಕ್ಷೆ ಸವಿತಾ ಘಾಟ್ಕೆ , ಗ್ರಾಜಿಯೇಟ್ ಕೋ ಆಪರೇಟಿವ್ ಬ್ಯಾಂಕ್ ನ ನಿರ್ದೇಶಕಿ ವರಲಕ್ಷ್ಮಿ ಅಜಯ್, ಚಕ್ರಪಾಣಿ, ಮಹಾನ್ ಶ್ರೇಯಸ್, ಜಯಶ್ರೀ ಶಿವರಾಂ, ಹಾಗೂ ಇನ್ನಿತರರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X