545 ಪಿಎಸ್ಐ ಹುದ್ದೆ | ನಮ್ಮ ಹೋರಾಟಕ್ಕೆ ಕೊನೆಗೂ ಜಯ: ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಹಾಗೂ ಪಾರದರ್ಶಕವಾಗಿ ಮರುಪರೀಕ್ಷೆ ನಡೆಸಿ, ಅಂದು ಬಿಜೆಪಿ ಸರ್ಕಾರ ಲೂಟಿಗೆ ಬಳಸಿಕೊಂಡಿದ್ದ ಅದೇ 545 ಪಿಎಸ್ಐ ಹುದ್ದೆಗಳಿಗೆ ಪ್ರತಿಭಾವಂತ ಅಭ್ಯರ್ಥಿಗಳನ್ನು ನಿಯಮಾನುಸಾರ, ನ್ಯಾಯಸಮ್ಮತವಾಗಿ ಆಯ್ಕೆ ಮಾಡಿದೆ. ಆಯ್ಕೆ ಪ್ರಕ್ರಿಯೆ ವಿಳಂಬವಾದರೂ ಪಾರದರ್ಶಕವಾಗಿರಬೇಕು ಎನ್ನುವುದು ನಮ್ಮ ಉದ್ದೇಶವಾಗಿತ್ತು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆಯ್ಕೆಯಾದ ಅಭ್ಯರ್ಥಿಗಳೆಲ್ಲರಿಗೂ ಶುಭಕೋರಿ ಪೋಸ್ಟ್‌ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ವ್ಯವಸ್ಥೆಯಿಂದಾಗಿ ಪ್ರತಿಭಾವಂತ ಪಿಎಸ್ಐ ಅಭ್ಯರ್ಥಿಗಳು ಕಟ್ಟಿಕೊಂಡಿದ್ದ ಕನಸು ಕಮರಿಹೋಗಿತ್ತು,PSI ನೇಮಕಾತಿಯ ಬೃಹತ್ ಹಗರಣವನ್ನು ಬಯಲಿಗೆಳೆಯುವ ನನ್ನ ಮೊದಲ ಹೆಜ್ಜೆಯಿಂದಲೇ ಪ್ರತಿಭಾವಂತರಿಗೆ ನ್ಯಾಯ ದೊರೆಯುವ ವಿಶ್ವಾಸವಿತ್ತು, ನಮ್ಮ ಹೋರಾಟದಲ್ಲಿ ಬದ್ಧತೆಯೂ ಇತ್ತು” ಎಂದಿದ್ದಾರೆ.

“ನಾವು ಈ ಹಗರಣವನ್ನು ಬಿಚ್ಚಿಟ್ಟಾಗ ಅಂದಿನ ಬಿಜೆಪಿ ಸರ್ಕಾರದ ಗೃಹಸಚಿವರಾದಿಯಾಗಿ ಬಿಜೆಪಿ ನಾಯಕರೆಲ್ಲರೂ ಸದನದಲ್ಲೇ “ಹಗರಣ ನಡೆದೇ ಇಲ್ಲ” ಎನ್ನುವ ಶತಮಾನದ ಹಸಿ ಸುಳ್ಳನ್ನು ಸತ್ಯದ ತಲೆಯ ಮೇಲೆ ಸುತ್ತಿಗೆಯಲ್ಲಿ ಹೊಡೆದಂತೆ ಹೇಳಿದ್ದರು. ಇಷ್ಟೂ ಸಾಲದೆಂಬಂತೆ, ನನ್ನ ಬಾಯಿ ಮುಚ್ಚಿಸಲು ಬಿಜೆಪಿಗರು ನಡೆಸಿದ ಕಸರತ್ತು ಒಂದೆರಡಲ್ಲ. ನನಗೆ CID ಪೊಲೀಸರ ಮೂಲಕ ಎರಡೆರಡು ಬಾರಿ ನೋಟಿಸ್ ನೀಡಿದ್ದರು. ಪ್ರಮುಖ ಆರೋಪಿ ಆರ್.ಡಿ ಪಾಟೀಲನೊಂದಿಗೆ ನನ್ನ ಹೆಸರು ತಳುಕು ಹಾಕಲು ಯತ್ನಿಸಿದ್ದರು. ನನ್ನ ವಿರುದ್ಧ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತು ತಮ್ಮ ಕೊಳಕು ನಾಲಿಗೆಯ ಮೂಲಕ ಯುದ್ಧ ಸಾರಿದ್ದರು. “ಕಾನ್ವೆಂಟ್ ದಲಿತ್” ಎಂಬ ಬಿರುದನ್ನೂ ಕೊಟ್ಟಿದ್ದರು” ಎಂದು ಕಿಡಿಕಾರಿದ್ದಾರೆ.

Advertisements

“ನೀರಿಗಿಳಿದ ಮೇಲೆ ಚಳಿಯ ಚಿಂತೆಯೇಕೆ” ಎನ್ನುವಂತೆ ನ್ಯಾಯದ ಹೋರಾಟಕ್ಕೆ ಇಳಿದ ಮೇಲೆ ಬಿಜೆಪಿಗರ ದಾಳಿಗಳನ್ನು ಲೆಕ್ಕಿಸಲಿಲ್ಲ, ಲೆಕ್ಕಿಸುವ ಜಾಯಮಾನವೂ ನನ್ನದಲ್ಲ. ಇಂದು ನಮ್ಮ ಸರ್ಕಾರ ನಡೆಸಿದ 545 ಪಿಎಸ್ಐ ಹುದ್ದೆಗಳ ಪ್ರಾಮಾಣಿಕ ನೇಮಕಾತಿಯೇ ಬಿಜೆಪಿಗರಿಗೆ ನಾನು ಕೊಡಬಹುದಾದ ಅತ್ಯುತ್ತಮ ಉತ್ತರ ಎಂದು ಭಾವಿಸಿದ್ದೇನೆ” ಎಂದಿದ್ದಾರೆ.

“ಚುನಾವಣೆಯ ಪೂರ್ವದಲ್ಲಿ ನಾವು ನೀಡಿದ್ದ ಭರವಸೆಯಂತೆಯೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ಕೊಡಲಾಗಿದೆ, ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿದೆ, ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ವಿಫಲರಾದ ಅಭ್ಯರ್ಥಿಗಳು ನಿರಾಸೆಗೊಳ್ಳದೆ ತಮ್ಮ ಪ್ರಯತ್ನವನ್ನು ಮುಂದುವರೆಸಬೇಕು, ಪ್ರತಿಭೆಗೆ ತಕ್ಕ ಫಲ ಪಡೆಯುವ ವಿಫುಲ ಅವಕಾಶಗಳನ್ನು ಸರ್ಕಾರ ಮಾಡಿಕೊಡಲಿದೆ. ಕಾಂಗ್ರೆಸ್ ಸರ್ಕಾರ ಯುವ ಸಮುದಾಯದ ಜೊತೆಗಿದೆ. ಯುವಜನರಿಗೆ ಸುಭದ್ರ ಬದುಕು ರೂಪಿಸುವುದು ನಮ್ಮ ಆದ್ಯತೆ ಹಾಗೂ ಬದ್ಧತೆಯಾಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X