ಬಿಜೆಪಿ ಸಿ ಪಿ ಯೋಗೇಶ್ವರ್ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

Date:

Advertisements

ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ಮತ್ತಷ್ಟು ರಂಗೇರುತ್ತಿದೆ. ಎರಡು ದಿನಗಳ ಹಿಂದೆ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ ಪಿ ಯೋಗೇಶ್ವರ್‌ ಇಂದು ಬೆಳಿಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರ ನಿವಾಸದಲ್ಲಿ ಕಾಣಿಸಿಕೊಂಡಿದ್ದಾರೆ.

ಡಿಸಿಎಂ ನಿವಾಸದಿಂದ ಇಬ್ಬರು ಒಂದೇ ಕಾರಿನಲ್ಲಿ ತೆರಳಿದ್ದು, ಯೋಗೇಶ್ವರ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಗುರುವಾರ ನಾಮಪತ್ರ ಸಲ್ಲಿಕೆ ಮಾಡುವುದಾಗಿ ಘೋಷಣೆ ಮಾಡಿರುವ ಸಿಪಿ ಯೋಗೇಶ್ವರ್‌ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತಾರಾ, ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಾರಾ, ಬಿಎಸ್‌ಪಿ ಅಥವಾ ಎಸ್‌ಪಿಯತ್ತ ಮುಖ ಮಾಡುತ್ತಾರಾ ಎಂಬುವುದು ತೀವ್ರ ಕುತೂಹಲ ಕೆರಳಿಸಿತ್ತು.

Advertisements

ಸಿಪಿ ಯೋಗೇಶ್ವರ್‌ ಬಿಜೆಪಿ ಚಿಹ್ನೆ ಅಡಿಯಲ್ಲೇ ಸ್ಪರ್ಧೆ ಮಾಡಲು ಅವಕಾಶ ಕೊಡಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ, ಕ್ಷೇತ್ರವನ್ನು ಬಿಟ್ಟುಕೊಡಲು ಕುಮಾರಸ್ವಾಮಿ ಸಿದ್ದರಿಲ್ಲ. ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟುಕೊಡಬಾರದು ಎಂಬುವುದು ಜೆಡಿಎಸ್‌ ಕಾರ್ಯಕರ್ತರ ಪಟ್ಟಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X