ಉಡುಪಿ | ನಿರ್ಭೀತವಾದ ಪತ್ರಿಕೋದ್ಯಮ ತುಂಬಾ ಅಗತ್ಯ: ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ

Date:

Advertisements

ಪ್ರಸ್ತುತ ದಿನಗಳಲ್ಲಿ ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ನಿರ್ಭೀತವಾದ ಪತ್ರಿಕೋದ್ಯಮ ತುಂಬಾ ಅಗತ್ಯವಾಗಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡವಿರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡದ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಸ್ಥ ಆರೋಗ್ಯ ಕಾಪಾಡಲು ಸಾಧ್ಯಾವಾಗುತ್ತದೆ. ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾ ಕೂಟ ಉದ್ಘಾಟಿಸಿ, ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಅವಿನಾಶ್ ಶೆಟ್ಟಿ ಮಾತನಾಡಿ, “ಪತ್ರಿಕೋದ್ಯಮ ಪ್ರಭಾವಿ ಮಾಧ್ಯಮವಾಗಿದ್ದು, ಜನರು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪತ್ರಕರ್ತರು ದಿನದ 30 ನಿಮಿಷಗಳನ್ನು ಕ್ರೀಡಾ ಚಟುವಟಿಕೆಗಳಿಗೆ ಮೀಸಲಿಡಬೇಕು. ಇದರಿಂದ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

Advertisements

ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಧ್ವಜಾರೋಹಣ ನೆರವೇರಿಸಿದರು. ರಜತ ಮಹೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ದೀಪಕ್ ಜೈನ್ ನೇತೃತ್ವದಲ್ಲಿ ವಿವಿಧ ತಾಲೂಕು ಸಂಘಗಳ ಸದಸ್ಯರಿಂದ ಪಥ ಸಂಚಲನ ನಡೆಯಿತು. ರಜತ ಮಹೋತ್ಸವ ಸಮಿತಿಯ ಕ್ರೀಡಾ ಸಂಚಾಲಕ ರಾಜು ಖಾರ್ವಿ ನೇತೃತ್ವದಲ್ಲಿ ಕ್ರೀಡಾ ಜ್ಯೋತಿ ಬೆಳಗಿಸಲಾಯಿತು. ಕ್ರೀಡಾಜ್ಯೋತಿಯನ್ನು ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಹಸ್ತಾಂತರಿಸಿದರು.

ಮುಖ್ಯ ಅತಿಥಿಗಳಾಗಿ ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ, ಉದ್ಯಮಿ ಆನಂದ ಪಿ. ಸುವರ್ಣ ಮಲ್ಪೆ, ಮಣಿಪಾಲ ಮಾಹೆಯ ಕ್ರೀಡಾ ಕಾರ್ಯದರ್ಶಿ ವಿನೋದ್ ನಾಯಕ್ ಭಾಗವಹಿಸಿದ್ದರು. ಕ್ರೀಡಾಕೂಟಕ್ಕೆ ಉಡುಪಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಚಾಲನೆ ನೀಡಿದರು.

ಸಂಘದ ರಜತ ಮಹೋತ್ಸವ ಸಮಿತಿಯ ಸಂಚಾಲಕ ಶರೀಫ್ ಕಾರ್ಕಳ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ಕೆ ಸಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದಲ್ಲಿ ಓಟ, ರಿಲೇ, ಹಗ್ಗಜಗ್ಗಾಟ, ಮಡಕೆ ಒಡೆಯುವುದು ಸೇರಿದಂತೆ ವಿವಿಧ ಮನರಂಜನಾ ಸ್ಪರ್ಧೆಗಳು ನಡೆದವು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X