ಬೆಳಗಾವಿ ನಗರದಲ್ಲಿರುವ ಮಳಿಗೆಗಳಿಗೆ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಸಲೇಬೇಕು ಎಂದು ನೂತನ ಆಯುಕ್ತೆ ಶುಭ ಬಿ ತಿಳಿಸಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಕನ್ನಡ ರಾಜ್ಯೋತ್ಸವದ 50ನೇ ವರ್ಷಕ್ಕೆ ಎಲ್ಲ ಅಧಿಕಾರಿಗಳು ಕನ್ನಡದ ಬಾವುಟದ ಬಣ್ಣದ ಐಡಿ ಹಾಕಿಕೊಳ್ಳಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆಯ ಎಲ್ಲ ಸಿಬ್ಬಂದಿಗಳಿಗೆ ಕನ್ನಡ ಬಾವುಟದ ಐಡಿ ಕಾರ್ಡ್ ಹಾಕಿಕೊಳ್ಳಬೇಕು” ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಹಾವೇರಿ | ರವಿಕೃಷ್ಣಾರೆಡ್ಡಿ ನಾಮಪತ್ರ ಸಲ್ಲಿಕೆ; ಶಿಗ್ಗಾವಿ-ಸವಣೂರನ್ನು ಮಾದರಿಯಾಗಿಸಲು ಶಪಥ
“ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುವ ಸೌಭಾಗ್ಯ ಸಿಕ್ಕಿದೆ. ಬೆಳಗಾವಿ ನಗರದ ಜನರ ಸಹಕಾರ ಅತಿ ಮುಖ್ಯವಾಗಿದೆ. ಬೆಳಗಾವಿಯ ಸಚಿವರು, ಸಂಸದರು, ಶಾಸಕರು, ಪಾಲಿಕೆಯ ಸದಸ್ಯರು ಹಾಗೂ ಸಿಬ್ಬಂದಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ್ಳೆಯ ಕೆಲಸ ಮಾಡಲಾಗುವುದು” ಎಂದು ಭರವಸೆ ನೀಡಿದರು.