ಆನೇಕಲ್ | ಬಿ ಶಿವಣ್ಣಗೆ ಹ್ಯಾಟ್ರಿಕ್ ಗೆಲುವು

Date:

Advertisements

ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿ ಶಿವಣ್ಣ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ. 1,34,797 ಮತ ಪಡೆಯುವ ಮೂಲಕ 31,325 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಎರಡು ದಶಕಗಳಿಂದ ಬಿಜೆಪಿ ಪ್ರಾಬಲ್ಯವಿದ್ದ ಅನೇಕಲ್ ವಿಧಾನಸಭಾ ಕ್ಷೇತ್ರವು ದಶಕದಿಂದೀಚೆಗೆ ‘ಕೈ’ ವಶದಲ್ಲಿದೆ. ಸತತ ಎರಡು ಸಲ ಗೆದ್ದಿರುವ ಕಾಂಗ್ರೆಸ್‌ನ ಬಿ ಶಿವಣ್ಣ ಮುರನೇ ಬಾರಿಯೂ ಕ್ಷೇತ್ರವನ್ನು ಮತ್ತೆ ತೆಕ್ಕೆಗೆ ಪಡೆದು ಹ್ಯಾಟ್ರಿಕ್‌ ಗೆಲುವ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್‌ ಸಿ ಹುಲ್ಲಹಳ್ಳಿ 1,03,472 ಮತ ಪಡೆದು ಹಿನ್ನೆಡೆಯಾಗಿದ್ದಾರೆ. 21 ಸುತ್ತುಗಳಲ್ಲಿ ಮತ ಎಣಿಕೆಯಾಯಿತು. ಒಂದು ಸುತ್ತು ಹೊರತುಪಡಿಸಿ ಉಳಿದ 20 ಸುತ್ತುಗಳಲ್ಲಿಯೂ ಶಿವಣ್ಣ ಮುನ್ನೆಡೆ ಕಾಯ್ದುಕೊಂಡರು. ಕಸಬಾ ಹೋಬಳಿಯಲ್ಲಿ 11,419 ಮತಗಳ ಲೀಡ್‌ ಪಡೆದಿದ್ದಾರೆ.

Advertisements

“ರಾಹುಲ್‌ ಗಾಂಧಿ ಅವರ ರೋಡ್‌ ಶೋ ನಂತರ ಕಾರ್ಯಕರ್ತರಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಾಯಿತು. ಆನೇಕಲ್‌ ವಿಧಾನಸಭಾ ಕ್ಷೇತ್ರದ ಜನತೆ ಮೂರು ಬಾರಿ ಆಶೀರ್ವಾದ ಮಾಡುವ ಮೂಲಕ ನಮ್ಮ ಜವಾಬ್ದಾರಿ ಹೆಚ್ಚಿಸಿದ್ದಾರೆ” ಎಂದು ಕಾಂಗ್ರೆಸ್‌ ಅಭ್ಯರ್ಥಿ ಶಿವಣ್ಣ ಹೇಳಿದರು.

ಆನೇಕಲ್ ವಿಧಾನಸಭಾ ಕ್ಷೇತ್ರ ರಚನೆಯಾದ 1997 ರಿಂದ 1994ರವರೆಗೆ ಕಾಂಗ್ರೆಸ್​ ತೆಕ್ಕೆಯಲ್ಲಿತ್ತು. 1978ರಲ್ಲಿ ಮಾತ್ರ ಜೆಎನ್‌ ಪಿ ಅಭ್ಯರ್ಥಿ ವೈ ರಾಮಕೃಷ್ಣ ಗೆದ್ದಿದ್ದರು. 1983ರವರೆಗೆ ಬಿಜೆಪಿಯ ಸುಳಿವೇ ಇರಲಿಲ್ಲ. ಕ್ರಮೇಣ ಪಕ್ಷ ಸಂಘಟನೆ ಮೂಲಕ ಕ್ಷೇತ್ರದಲ್ಲಿ ಹಿಡಿತ ಸಾಧಿಸಿತು. 1994 ರಿಂದ 2013ರವರೆಗೆ ಬಿಜೆಪಿ ಅಭ್ಯರ್ಥಿಗಳು ಕ್ಷೇತ್ರದ ಚುಕ್ಕಾಣಿ ಹಿಡಿದಿದ್ದರು. ಈಗ ಮತ್ತೆ ‘ಕೈ’ ತನ್ನ ಹಿಡಿತ ಸಾಧಿಸಿದೆ.

ಈ ಸುದ್ದಿ ಓದಿದ್ದೀರಾ? ಗದಗ | ನಾಲ್ಕು ಕೇತ್ರಗಳಲ್ಲಿ ಕಾಂಗ್ರೆಸ್‌-ಬಿಜೆಪಿ ತಲಾ ಎರಡರಲ್ಲಿ ಗೆಲುವು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X