ಉಡುಪಿ | ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Date:

Advertisements

ಉಡುಪಿ ಜಿಲ್ಲೆಯ ಎಲ್ಲ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು ಕಾಲುಬಾಯಿ ಜ್ವರದ ಲಸಿಕೆ ಹಾಕಿಸುವ ಮೂಲಕ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಹೇಳಿದರು.

ನೀಲಾವರ ಗೋಶಾಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದ ಅವರು, “ಕಾಲುಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಅಕ್ಟೋಬರ್‌ 20ರಿಂದ ನವೆಂಬರ್‌ 20ರವರೆಗೆ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ” ಎಂದು ತಿಳಿಸಿದರು.

“ಜಿಲ್ಲೆಯ ಎಲ್ಲ ಹೈನುಗಾರರು ಪಶು ಸಂಗೋಪನಾ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು ಮತ್ತು ಕೆಎಂಎಫ್ ಸಿಬ್ಬಂದಿಗಳು ಹಾಗೂ ಗ್ರಾಮ ಮಟ್ಟದಲ್ಲಿ ಪಶು ಸಖಿಯರು ಜಾನುವಾರುಗಳಿಗೆ ಲಸಿಕೆ ನೀಡಲು ಮನೆ ಭೇಟಿ ಮಾಡಿದ ಸಂದರ್ಭದಲ್ಲಿ ಅವರುಗಳಿಗೆ ಸೂಕ್ತ ರೀತಿ ಸ್ಪಂದಿಸುವ ಮೂಲಕ ಅವರುಗಳಿಗೆ ಸಹಕಾರ ನೀಡಬೇಕು” ಎಂದರು.

Advertisements

ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮಿಜಿ ಮಾತನಾಡಿ, “ಜಿಲ್ಲೆ, ರಾಜ್ಯ ಹಾಗೂ ದೇಶಾದ್ಯಂತ ನಡೆಯುತ್ತಿರುವ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವು ಯಶಸ್ವಿಯಾಗಲಿ” ಎಂದು ಆಶೀರ್ವಚನ ನೀಡಿದರು.

ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಎಂ ಸಿ ರೆಡ್ಡಪ್ಪ, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ. ಶಿವಯೋಗಿ ಬಿ, ಜಿಲ್ಲಾ ನೋಡಲ್ ಅಧಿಕಾರಿ ಡಾ.ಸಂದೀಪ ಕುಮಾರ್, ಡಾ. ಉದಯಕುಮಾರ್ ಶೆಟ್ಟಿ ನೀಲಾವರ, ಗೋಶಾಲೆಯ ಟ್ರಸ್ಟಿಗಳಾದ ಡಾ. ಸರ್ವೋತ್ತಮ ಉಡುಪ, ನಾಗರಾಜ ರಾವ್, ಕೆಎಂಎಫ್‌ನ ಸಹಾಯಕ ವ್ಯವಸ್ಥಾಪಕ ಡಾ. ನಿಜಾಮ್ ಪಟೇಲ್, ಬ್ರಹ್ಮಾವರ ತಾಲೂಕಿನ ಪಶುಪಾಲನಾ ಇಲಾಖೆ ಮತ್ತು ಕೆಎಂಎಫ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗೋವರ್ಧನ ಗಿರಿ ಟ್ರಸ್ಟ್ ಸದಸ್ಯರು, ಸಿಬ್ಬಂದಿ, ಪಶುಸಖಿಯರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X