ಯಾದಗಿರಿ | ಕಾಂಗ್ರೆಸ್-ಬಿಜೆಪಿ ರಾಜಕೀಯ ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಲಿ: ದಸಂಸ ಆಗ್ರಹ

Date:

Advertisements

ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಾಗರಿಕರ ಸಮಸ್ಯೆಗಳನ್ನು ಮರೆತು ಪರಸ್ಪರ ರಾಜಕೀಯ ಕೆಸರೆರಚಾಟದಲ್ಲಿ ನಿರತವಾಗಿದೆ. ದೇಶದಲ್ಲಿ ನಡೆಯುತ್ತಿರುವ ಸಂವಿಧಾನ ವಿರೋಧಿ ಚಟುವಟಿಕೆಗಳನ್ನು ತಡೆಯಲು ಮಾರ್ಗಸೂಚನೆ ನೀಡುವಂತೆ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಯಾದಗಿರಿ ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆ ಬಳಿಕ ಯಾದಗಿರಿ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರ ಸಲ್ಲಿಸಿ ಜಿಲ್ಲಾ ಸಂಯೋಜಕ ರಾಯಪ್ಪ ಸಾಲಿಮನಿ ಮಾತನಾಡಿ, “ಭಾರತೀಯರಾದ ನಾವು ಸಂವಿಧಾನವನ್ನು ಅರ್ಪಿಸಿಕೊಂಡು ಎಪ್ಪತ್ತೈದು ವರ್ಷಗಳು ಸವಿಸಿದ್ದೇವೆ. ಸಂವಿಧಾನದ ಪ್ರಯುಕ್ತ ಸಾವಿರಾರು ವರ್ಷಗಳು ಅನುಭವಿಸಿದ ಪುರೋಹಿತಶಾಹಿ ಮತ್ತು ಮನುಧರ್ಮಶಾಸ್ತ್ರಗಳ ಶೋಷಣೆಯಿಂದ ಮುಕ್ತಿ ಪಡೆಯುವಂತಾಯಿತು. ಇಂದು ಪ್ರಜಾಪ್ರಭುತ್ವದ ಆಶಯಗಳು ಜಾರಿಗೆ ಬಂದಿದ್ದರೂ; ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಅರಿವೇ ಇಲ್ಲದೆ ದೇಶದ ಕೋಟ್ಯಾನುಕೋಟಿ ದಲಿತರು, ತಳಸಮುದಾಯಗಳು, ಆದಿವಾಸಿಗಳು, ಅಲೆಮಾರಿಗಳು ಈ ಸಮಾಜದಲ್ಲಿ ಅಭಿವೃದ್ಧಿ ಕಾಣದೆ ಅತಂತ್ರ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಚುನಾಯಿತ ಪ್ರತಿನಿಧಿಗಳು ಮತ್ತು ಆಡಳಿತ ರೂಡ ಸರ್ಕಾರಗಳು ಈ ಸಮುದಾಯಗಳ ಸಾರ್ವಭೌಮತ್ವವನ್ನು ಕಾಪಾಡಬೇಕಾಗಿರುವುದು ಇವರುಗಳ ಆದ್ಯ ಕರ್ತವ್ಯವಾಗಬೇಕಿತ್ತು” ಎಂದರು.

protest 13

“ಪ್ರಜಾಪ್ರಭುತ್ವವೆಂದರೆ, ಚುನಾವಣೆಗಳಲ್ಲಿ ಸ್ಪರ್ಧಿಸುವುದು, ಶಾಸಕರು, ಸಂಸದರು, ಮಂತ್ರಿಗಳು, ಮುಖ್ಯಮಂತ್ರಿಗಳು ಮತ್ತು ಪ್ರಧಾನಮಂತ್ರಿಯಾಗುವ ಪ್ರಕ್ರಿಯೆ ಅಲ್ಲ. ಸಮಾಜದ ನಾಗರಿಕರ ಸಮಗ್ರ ಅಭಿವೃದ್ಧಿ, ಅವರ ಜೀವನಕ್ರಮ ಮತ್ತು ಹಿತಾಸಕ್ತಿಗಳನ್ನು ಕಾಪಾಡುವುದು. ಸಾಮಾಜಿಕ ನ್ಯಾಯ ಮಾನವ ಹಕ್ಕುಗಳು ದೊರೆಯದೆ ಇರುವ ಅವಮಾನಿತ, ಶೋಷಿತ ಸಮುದಾಯಗಳ ಬಗ್ಗೆ ಸಂಸತ್ತು, ಶಾಸನ ಸಭೆಗಳಲ್ಲಿ ಚರ್ಚಿಸಿ, ಅಗತ್ಯ ಯೋಜನೆಗಳನ್ನು ರೂಪಿಸಿ, ಕಾರ್ಯರೂಪಕ್ಕೆ ತರುವುದು. ಆದರೆ ಅಧಿಕಾರಕ್ಕೆ ಬರುವ ಸರ್ಕಾರಗಳು, ಸಾಮಾಜಿಕ ನ್ಯಾಯ, ಅಸ್ಪಶ್ಯತೆ, ಜಾತಿ ತಾರತಮ್ಯ ಅಸಮಾನತೆಗಳನ್ನು ಹೋಗಲಾಡಿಸಲು ಯಾವುದೇ ರೀತಿ ಕ್ರಮಗಳನ್ನು ಕೈಗೊಳ್ಳದೆ ಇರುವುದರಿಂದ ಇಂದು ಮೂಲಭೂತ ಹಕ್ಕುಗಳಿಂದ ವಂಚಿತರಾಗಿ ಕನಿಷ್ಠ ಅವಕಾಶಗಳಿಲ್ಲದೆ ಜೀವನ ಸಾಗಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

“ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿ.ಜೆ.ಪಿ. ಸರ್ಕಾರ ಸಾರ್ವಜನಿಕರ ಪರವಾಗಿದ್ದೇವೆ ಎಂದು ಹೇಳಿಕೊಳ್ಳುವುದರ ಮೂಲಕ ಅವರ ಸಮಸ್ಯೆಗಳ ಪರಿಹಾರಕ್ಕಾಗಿ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ. ಬದಲಿಗೆ ರೈತ, ಕಾರ್ಮಿಕ ಮತ್ತು ಕೃಷಿ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿ, ರೈತರ ಜೇನ್ನು ತಂತುತಗೊಳಿಸಿದ್ದಾರೆ. CAA, NPR, NRC ಮತ್ತು EWS ನಂತಹ ಜನ ವಿರೋಧಿ ಕಾನೂನುಗಳು ಮೀಸಲಾತಿ ನೀತಿಗಳನ್ನು ತಂದು ಬಹುಜನರಲ್ಲಿ ಗೊಂದಲಗಳನ್ನು ಸೃಷ್ಟಿಸಿದ್ದಾರೆ. ನಿರುದ್ಯೋಗ ಸಮಸ್ಯೆಗಳು ನಿವಾರಿಸುವುದಾಗಿ ಹೇಳಿಕೊಳ್ಳುತ್ತಾ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರು, ಕಾರ್ಪೊರೇಟ್ ಸಂಸ್ಥೆಗಳಿಗೆ ಮಾರಾಟ ಮಾಡುವ ಮೂಲಕ ದೇಶದ ಯುವಕರಲ್ಲಿ ಅಭದ್ರತೆಯನ್ನು ಹೆಚ್ಚಿಸುತ್ತಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದರು.

“ಚುನಾವಣೆಗಳನ್ನು ಕೇಂದ್ರವಾಗಿಟ್ಟುಕೊಂಡು ಅಧಿಕಾರದಾಹದಿಂದ, ಹಿಂದುತ್ವ, ಅಖಂಡ ಭಾರತ ಮುಂತಾದ ಭಾವನಾತ್ಮಕ ವಿಷಯಗಳನ್ನು ಪ್ರಚಾರಪಡಿಸುತ್ತಾ ಆರ್.ಎಸ್.ಎಸ್. ಮತ್ತು ಸಂಘ ಪರಿವಾರದ ಗುಪ್ತ ಕಾರ್ಯಸೂಚಿಗಳಾದ ಮನುಧರ್ಮ ಶಾಸ್ತ್ರವನ್ನು ಮರುಸ್ಥಾಪಿಸಲು ಹೊರಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕರ್ನಾಟಕದ ಇತ್ತೀಚಿನ ರಾಜಕೀಯ ಬೆಳವಣಗೆಗಳನ್ನು ಗಮನಿಸಿದಾಗ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಸುತ್ತಿರುವ ಸಂಚುಗಳು ಅರ್ಥವಾಗುತ್ತದೆ. ಅನಗತ್ಯವಾಗಿ ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಜನಸಾಮಾನ್ಯರಲ್ಲಿ ಗೊಂದಲಗಳನ್ನು ಸೃಷ್ಟಿಸುತ್ತಿದ್ದಾರೆ. ಸಾರ್ವಜನಿಕ ಸಮಸ್ಯೆಗಳಾದ ರೈತ, ಕಾರ್ಮಿಕ, ಕೃಷಿ, ನಿರುದ್ಯೋಗ, ಆಹಾರ, ಆರೋಗ್ಯ ಬೆಲೆ ಏರಿಕೆ ಮುಂತಾದ ಮೂಲಭೂತ ಸಮಸ್ಯೆಗಳನ್ನು ಮರೆತು ಜನಸಾಮಾನ್ಯರಲ್ಲಿ ದಿಕ್ಕುತಪ್ಪಿಸುತ್ತಾ ಬಿ.ಜೆ.ಪಿ ಮತ್ತು ಜೆ.ಡಿ.ಎಸ್ ಪಕ್ಷಗಳು ಅಧಿಕಾರದ ಆಸೆಯಿಂದ ದುಷ್ಟಕೂಟ ಕಟ್ಟಿಕೊಂಡು ಕೋಮುವಾದಿ ರಾಜಕಾರಣ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ರಾಜ್ಯದಲ್ಲಿ ನಡೆಯುತ್ತಿರುವ ಈ ಎಲ್ಲಾ ಬೆಳವಣಗೆಗಳನ್ನು ಗಮನಿಸುತ್ತಾ, ಸಂವಿಧಾನ ವಿರೋದಿ ಚಟುವಟಿಕೆಗಳಲ್ಲಿ ತೊಡಗಿರುವ ಇವರನ್ನು ಕಾನೂನುಬದ್ದವಾಗಿ ನಿಯಂತ್ರಿಸಲು ಮತ್ತು ಮಾರ್ಗಸೂಚನೆಗಳನ್ನು ನೀಡಲು ತಮ್ಮನ್ನು ಕೋರುತ್ತಾ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಮತ್ತು ಅಂಬೇಡ್ಕರ್ ಸಿದ್ದಾಂತಗಳನ್ನು ಅಪ್ರಸ್ತುತಗೊಳಿಸಲು ಹೊರಟಿರುವ ಈ ಕೋಮುವಾದಿ ಶಕ್ತಿಗಳ ಕುತಂತ್ರಗಳನ್ನು ಬಯಲುಗೊಳಿಸಲು ಕರ್ನಾಟಕದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ‘ಜನಾಂದೋಲನ ಪ್ರತಿಭಟನೆ’ ಯನ್ನು ನಡೆಸುವ ಮೂಲಕ ಜನ ಜಾಗೃತಿಗೊಳಿಸುತ್ತಾ ಕರ್ನಾಟಕದ ಈ ಪರಿಸ್ಥಿತಿಯ ಬಗ್ಗೆ ಸಂವಿಧಾನಾತ್ಮಕ ಕ್ರಮಗಳ ಜಾರಿಗಾಗಿ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಮೂಲಸೌಲಭ್ಯ ಒದಗಿಸುವಂತೆ ಭೀಮ್‌ ಆರ್ಮಿ ಆಗ್ರಹ

ಈ ಸಂದರ್ಭದಲ್ಲಿ ರವಿಚಂದ್ರ ಬೊಮ್ಮನಹಳ್ಳಿ, ಚಂದ್ರಶೇಖರ ಹತ್ತಿಗುಡೂರ, ಮಾನಪ್ಪ ಜೇಗ್ರಿ, ಚಂದ್ರಶೇಖರ ಹುಲಿಮನಿ, ಲಕ್ಷ್ಮಣ ಆರ್.ಹಳಿಸಗರ, ಮಲ್ಲಿಕಾರ್ಜುನ.ಎಂ.ಬಂಡ, ನಿಂಗಪ್ಪ ನಾಟೇಕಾರ, ಪರಶುರಾಮ ರೋಜಾ, ಜೆ.ಕೆ ತಿಪ್ಪನಹಳ್ಳಿ, ಮಾನಪ್ಪ ಬಳಗನೋರ, ಶೇಖರ ಬಡಿಗೇರ, ಹುಸನಪ್ಪ ತಿಪ್ಪನಹಳ್ಳಿ, ಶಿವಕುಮಾರ, ಬಸವರಾಜ ಕಂಬಾರ, ಸೋಮಶೇಖರ ಕಟ್ಟಿಮನಿ, ಮಾಲುಪ್ರೆ, ಮಲ್ಲಪ್ಪ ಮಾಲಗತ್ತಿ, ಗೋಪಾ ಕಾಂಬ್ಳೆ, ರವಿಕುಮಾರ ಹೊಸ್ಮನಿ, ಸುಭಾಷ ರಸ್ತಾಪುರ,‌ ಶ್ರೀನಿವಾಸ ಅಗ್ನಿ, ಭೀಮು ಕಟ್ಟಿಮನಿ, ಈರಪ್ಪ ತಳವಾರ,‌ ಅಂಬರೀಶ್ ನಾಟೇಕಾರ, ಶರಣು ಉಕ್ಕಿನಾಳ, ಅಂಬ್ಲಪ್ಪ ದಸ್ತಾಪುರ್, ರಾಘವೇಂದ್ರ ಹಂಚಿನಾಳ, ಹಣಮಂತ ‌ಹೊಸಮನಿ, ಪ್ರಕಾಶ, ಶಾಂತಪ್ಪ,‌ ಆಕಾಶ, ಸೋಮಶೇಖರ್ ಇನ್ನಿತರರು ಉಪಸ್ಥಿತರಿದ್ದರು.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X