ಕೇವಲ 16 ಮತಗಳಿಂದ ಸೋಲು ಅನುಭವಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ

Date:

Advertisements
  • ಮೂರು ಬಾರಿ ಮತ ಎಣಿಕೆ ನಂತರ ಬಿಜೆಪಿ ಅಭ್ಯರ್ಥಿಗೆ ಗೆಲುವು
  • ಮತ ಎಣಿಕೆ ಗೊಂದಲದಿಂದಾಗಿ ತಡರಾತ್ರಿ ಪ್ರಕಟವಾದ ಫಲಿತಾಂಶ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶವು ಹಲವು ಗೊಂದಲಗಳನ್ನು ಮೀರಿ ಶನಿವಾರ ತಡರಾತ್ರಿ ಪ್ರಕಟಗೊಂಡಿತು. ಬಿಜೆಪಿ ಅಭ್ಯರ್ಥಿ ಸಿ.ಕೆ ರಾಮಮೂರ್ತಿ ವಿರುದ್ಧ ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಕೇವಲ 16 ಮತಗಳಿಂದ ಸೋಲೊಪ್ಪಿಕೊಂಡರು.

ಮರು ಎಣಿಕೆ ಪ್ರಕ್ರಿಯೆಯಲ್ಲಿ ಉಂಟಾದ ಗೊಂದಲದಿಂದ ತಡರಾತ್ರಿಯವರೆಗೂ ಫಲಿತಾಂಶ ಘೋಷಣೆಯಾಗಿರಲಿಲ್ಲ. ಮೂರು ಬಾರಿ ಮತ ಎಣಿಕೆ ಮಾಡಲಾಯಿತು. ಅಧಿಕಾರಿಗಳ ಈ ಮರು ಎಣಿಕೆಯನ್ನು ಕಾಂಗ್ರೆಸ್ ಮುಖಂಡರು ಒಪ್ಪದೇ ಗೊಂದಲ ಸೃಷ್ಟಿಯಾಗಿತ್ತು.

ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳು ತಮ್ಮದೇ ವಾದ ಮಂಡಿಸಿ ಅವರಂತೆಯೇ ಫಲಿತಾಂಶ ಘೋಷಣೆಯಾಗಬೇಕೆಂದು ಒತ್ತಾಯಿಸಿದರು.

Advertisements

ಜಯನಗರ ಮತ ಎಣಿಕೆ ಕೇಂದ್ರಕ್ಕೆ ಬಂದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಮತ ಎಣಿಕೆ ಕೇಂದ್ರದಲ್ಲಿ ಅಧಿಕಾರಿಗಳು ಮರು ಎಣಿಕೆ ಸಂದರ್ಭದಲ್ಲಿ ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದರು. ನಂತರ ಬಿಜೆಪಿ ಗೆಲುವನ್ನು ನಿರ್ಧರಿಸಲಾಯಿತು. ಸಿ ಕೆ ರಾಮಮೂರ್ತಿ ಅವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಮತ ಎಣಿಕೆ ಕೇಂದ್ರದ ಉದ್ವಿಗ್ನ ವಾತಾವರಣ

ಜಯನಗರ ವಿಧಾನಸಭೆ ಕ್ಷೇತ್ರದ ಮತ ಎಣಿಕೆಯಲ್ಲಿ  ಅಕ್ರಮವಾಗಿದೆ ಎಂದು ಕಾಂಗ್ರೆಸ್  ಬಿಜೆಪಿ ನಾಯಕರು ಪರಸ್ಪರ ಆರೋಪಿಸಿ ಗೊಂದಲ ಸೃಷ್ಟಿಯಾಗಿತ್ತು. ಕಾರ್ಯಕರ್ತರು ಪರಸ್ಪರ ಕೂಗಾಟ, ತಳ್ಳಾಟದಲ್ಲಿ ತೊಡಗಿದ್ದರು. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿ, ಹೆಚ್ಚಿನ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು.

ಆರಂಭದಲ್ಲಿ ಎಲ್ಲ ಸುತ್ತುಗಳ ಮತ ಎಣಿಕೆ ಮುಗಿದ ಬಳಿಕ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ 294 ಮತಗಳ ಅಂತರದಿಂದ ಬಿಜೆಪಿಯ ಸಿ ಕೆ ರಾಮಮೂರ್ತಿ ಅವರಿಗಿಂತ ಮುಂದಿದ್ದರು. ಈ ಸಂದರ್ಭದಲ್ಲಿ ರಾಮಮೂರ್ತಿ ಮರು ಎಣಿಕೆಗೆ ಮನವಿ ಮಾಡಿದರು. ಅದನ್ನು ಪುರಸ್ಕರಿಸಿದ ಚುನಾವಣೆ ಅಧಿಕಾರಿ ಮರು ಎಣಿಕೆ ಮಾಡಿದರು. ಆಗ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ ದೊರೆಯಿತು.

ಮರುಎಣಿಕೆಯಲ್ಲಿ ಅಕ್ರಮವಾಗಿದೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಘೋಷಣೆ ಕೂಗಿದರು. ಇದರ ವಿರುದ್ಧ ಬಿಜೆಪಿಯವರೂ ಘೋಷಣೆ ಕೂಗಿದರು. ಕಾಂಗ್ರೆಸ್ ಮುಖಂಡರಾದ ಡಿ ಕೆ ಶಿವಕುಮಾರ್, ರಾಮಲಿಂಗಾರೆಡ್ಡಿ ಸ್ಥಳದಲ್ಲಿ ಕುಳಿತು ಚುನಾವಣೆ ಅಧಿಕಾರಿ ವಿರುದ್ಧ ಆರೋಪಿಸಿದರು. ಸಂಸದ ತೇಜಸ್ವಿ ಸೂರ್ಯ ಅವರನ್ನು ಏಕೆ ಒಳಗೆ ಬಿಟ್ಟಿರಿ ಎಂದು ಪ್ರಶ್ನಿಸಿದರು. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಯಿತು.

ಜಯನಗರದ ಎಸ್‌ಎಸ್‌ಎಂಆರ್‌ಐ ಪಿಯು ಕಾಲೇಜಿನಲ್ಲಿ ಮತ ಎಣಿಕೆ ಕೇಂದ್ರದ ಸುತ್ತ ಸಾಕಷ್ಟು ಜನರು ಸೇರಿದ್ದರು. ಸಂಸದ ಡಿ.ಕೆ. ಸುರೇಶ್ ಹಾಗೂ ಬೆಂಬಲಿಗರು ಮತ ಎಣಿಕೆ ಕೇಂದ್ರದ ಒಳಗೆ ಹೋಗಲು ಗೇಟ್ ಅನ್ನು ತಳ್ಳಾಡಿದರು. ಪೊಲೀಸರು ಮಧ್ಯ ಪ್ರವೇಶಿಸಿ ಅವರನ್ನು ಸಮಾಧಾನಗೊಳಿಸಿದರು.

ಈ ಸುದ್ದಿ ಓದಿದ್ದೀರಾ? ಕುಮಾರಸ್ವಾಮಿ ಅವರೇ ಪಕ್ಷ ವಿಸರ್ಜನೆ ಯಾವಾಗ? ಕಾಲೆಳೆದ ನೆಟ್ಟಿಗರು

ಮರು ಮತ ಎಣಿಕೆ ಸಂದರ್ಭದಲ್ಲಿ ಅಂಚೆ ಮತಗಳನ್ನು ಸೇರಿಸಲಾಗಿದೆ. ಮೊದಲು ತಿರಸ್ಕರಿಸಿದ ಅಂಚೆ ಮತಗಳನ್ನು ಪರಿಗಣನೆಗೆ ತೆಗೆದುಕೊಂಡು ಚುನಾವಣೆ ಅಧಿಕಾರಿಗಳು ಅಕ್ರಮ ಎಸಗಿದ್ದಾರೆ. ಮೊದಲು ಎಣಿಕೆ ಮುಗಿದ ಸಂದರ್ಭದಲ್ಲಿ ಸೌಮ್ಯ ರೆಡ್ಡಿ ಮುಂದಿದ್ದರು. ಸುಮಾರು 160 ಮತಗಳ ಅಂತರವಿತ್ತು. ಆದರೆ, ತಿರಸ್ಕೃತ ಮತಗಳನ್ನು ಸೇರಿಸಿಕೊಂಡು 17 ಮತಗಳ ಅಂತರದಿಂದ ಬಿಜೆಪಿಯ ಸಿ ಕೆ ರಾಮಮೂರ್ತಿ ಗೆದ್ದಿದ್ದಾರೆ ಎಂದು ಘೋಷಿಸಲು ಹೊರಟರು. ಅದಕ್ಕೆ ನಮ್ಮ ವಿರೋಧವಿದೆ ಎಂದು ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ಹೇಳಿದರು.

ಸೌಮ್ಯ ರೆಡ್ಡಿ 160 ಮತಗಳಿಂದ ಮುಂದಿದ್ದಾರೆ ಎಂದು ವೆಬ್ ಸೈಟ್‌ನಲ್ಲೂ ಪ್ರಕಟಿಸಲಾಗಿತ್ತು. ಅದನ್ನು ಫಲಿತಾಂಶ ಎಂದು ಪ್ರಕಟಿಸಿ ಎಂಬುದು ನಮ್ಮ ಒತ್ತಾಯ. ಆದರೆ ಇಲ್ಲಿನ ಕೆಲವು ಅಧಿಕಾರಿಗಳು ಬಿಜೆಪಿ ಪರವಾಗಿ ಕೆಲಸ ಮಾಡಿ, ತಿರಸ್ಕೃತ ಮತಗಳನ್ನೆಲ್ಲ ಸರಿ ಎಂದು ಪರಿಗಣಿಸಿದ್ದಾರೆ ಎಂದು ಆರೋಪಿಸಿದರು.

ಮತ ಎಣಿಕೆ ಕೇಂದ್ರಕ್ಕೆ ಸಂಸದ ತೇಜಸ್ವಿ ಸೂರ್ಯ ಹೋಗಬಾರದು ಎಂದಿದ್ದಾರೆ. ಆದರೆ, ಅದಕ್ಕೂ ಮೊದಲು ಎಣಿಕೆ ಕೇಂದ್ರದಲ್ಲಿ ಹೋಗಿ ಕುಳಿತಿದ್ದು ರಾಮಲಿಂಗಾರೆಡ್ಡಿ ಹಾಗೂ ಅವರ ಬೆಂಬಲಿಗರು. ನಾವು ಬಂದು ಅವರನ್ನೆಲ್ಲ ಹೊರಗೆ ಕಳಿಸಿದೆವು. ಈಗ ಜನರನ್ನೆಲ್ಲ ಕರೆದುಕೊಂಡು ಬಂದು ರೌಡಿಸಂ ಮಾಡುತ್ತಿದ್ದಾರೆ. ಈಗಲೇ ಇವರ ಗೂಂಡಾಗಿರಿ, ದೌರ್ಜನ್ಯ ಆರಂಭವಾಗಿದೆ ಎಂದು ಅಶೋಕ ದೂರಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X