ಸರ್ಕಾರ ರಚನೆಗೆ ಕಾಂಗ್ರೆಸ್ ಕಸರತ್ತು;‌ ಇಂದು ಸಂಜೆ ಖಾಸಗಿ ಹೋಟೆಲ್‌ನಲ್ಲಿ ಸಭೆ

Date:

Advertisements

ರಾಜ್ಯ ವಿಧಾನಸಭೆ ಚುನಾವಣೆ ಅಖಾಡದಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿದೆ. 135 ಸ್ಥಾನಗಳು ಕಾಂಗ್ರೆಸ್‌ಗೆ ಲಭಿಸಿದ್ದು, ಸರ್ಕಾರ ರಚನೆಗೆ ಕಸರತ್ತು ಆರಂಭವಾಗಿದೆ.

ಕಾಂಗ್ರೆಸ್​ ಗೆದ್ದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆ ಚರ್ಚೆ ಈಗ ಗರಿಗೆದರಿದೆ. ಈ ಹಿನ್ನೆಲೆಯಲ್ಲಿ ಇಂದು (ಮೇ 14) ಸಂಜೆ 6ಕ್ಕೆ ವಸಂತನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಈ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಎಲ್ಲ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರು ತಪ್ಪದೇ ಭಾಗವಹಿಸಬೇಕು ಎಂದು ಕೆಪಿಸಿಸಿ ಈಗಾಗಲೇ ಸೂಚಿಸಿದೆ.

Advertisements

ಈ ಸಭೆಯಲ್ಲಿ ವೀಕ್ಷಕರ ಸಮ್ಮುಖದಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ.

ಮೇ 15ರಂದು ಪ್ರಮಾಣ ವಚನ

ಇಂದಿನ ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಆಯ್ಕೆಯಾದ ಮುಖ್ಯಮಂತ್ರಿ ಮೇ 15ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಚುನಾವಣಾ ಪೂರ್ವದಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರ ನಡುವೆ ಮುಖ್ಯಮಂತ್ರಿ ಹುದ್ದೆಗೆ ಭಾರೀ ಪೈಪೋಟಿ ನಡೆದಿತ್ತು. ಇಬ್ಬರನ್ನು ಸಮಾಧಾನಿಸಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸುವಂತೆ ಮಾಡುವಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಯಶಸ್ವಿಯಾಗಿತ್ತು. ಇಂದಿನ ಸಭೆಯಲ್ಲಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.

ಶಾಸಕಾಂಗ ಪಕ್ಷದ ಆಯ್ಕೆಯ ಜೊತೆಗೆ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಿ, ಲಿಂಗಾಯತ ಸಮುದಾಯದಿಂದ ಎಂ ಬಿ ಪಾಟೀಲ, ದಲಿತ ಸಮುದಾಯದಿಂದ ಜಿ ಪರಮೇಶ್ವರ ಅಥವಾ ಕೆ ಎಚ್‌ ಮುನಿಯಪ್ಪ ಹಾಗೂ ಒಕ್ಕಲಿಗ ಸಮುದಾಯದಿಂದ ಡಿ ಕೆ ಶಿವಕುಮಾರ್‌ ಅವರಿಗೆ ನೀಡುವ ಬಗ್ಗೆ ಹೈಕಮಾಂಡ್‌ ಆಸಕ್ತಿ ತೋರಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X