ತುಮಕೂರು | ಹೆಚ್ಚು ಶಬ್ದ ಮಾಡುವ ಪಟಾಕಿಗಳ ನಿಷೇಧ : ಜಿಲ್ಲಾಧಿಕಾರಿ

Date:

Advertisements

ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿ ಹಬ್ಬವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 125 ಡೆಸಿಬಲ್‌ಗಳಿಗಿಂತಲೂ ಹೆಚ್ಚಿನ ಶಬ್ದ ಮಾಡುವ ಪಟಾಕಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.  

    ತುಮಕೂರು ಜಿಲ್ಲೆಯ ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಹಾಗೂ ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಈ ನಿಷೇಧಕ್ಕೆ ಸೂಚನೆ ನೀಡಲಾಗಿದೆ. ದೀಪಾವಳಿ ಹಬ್ಬವನ್ನು ಸಿಡಿಮದ್ದು ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಬೇಕು.

     ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿಗಳನ್ನು ಸಿಡಿಸುವುದು, ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿ ಮದ್ದುಗಳ ಮಾರಾಟವನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರದ ಸುತ್ತ-ಮುತ್ತ ಯಾವುದೇ ರೀತಿಯ ಶಬ್ದ ಉಂಟು ಮಾಡುವ ನಿಷೇಧಿತ ಪಟಾಕಿ, ಸಿಡಿಮದ್ದುಗಳನ್ನು ಬಳಸಬಾರದು. ಸಾರ್ವಜನಿಕರು ನಗರ ಮತ್ತು ಪಟ್ಟಣದ ಚಿಕ್ಕ-ಚಿಕ್ಕ ಬೀದಿಗಳಲ್ಲಿ ಪಟಾಕಿ, ಸಿಡಿಮದ್ದು ಹಾಗೂ ಬಾಣ-ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯವಾಗುವ ಸಾಧ್ಯತೆಯಿದ್ದು, ಪಟಾಕಿ ಹಾಗೂ ಸಿಡಿ ಮದ್ದುಗಳನ್ನು ವಸತಿ ಪ್ರದೇಶಗಳ ಬದಲು ಮೈದಾನಗಳಲ್ಲಿ ಸಿಡಿಸಬೇಕೆಂದು ಮನವಿ ಮಾಡಿದ್ದಾರೆ.

Advertisements

ಪಟಾಕಿ ಮಾರಾಟಗಾರರಿಗೆ ಸೂಚನೆ :

ಪಟಾಕಿ ಮಾರಾಟಗಾರರು ತಮ್ಮ ಮಳಿಗೆ, ಗೋದಾಮುಗಳಲ್ಲಿ ಹಸಿರು ಪಟಾಕಿ ಅಲ್ಲದೆ ಇನ್ನಾವುದೇ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವಂತಿಲ್ಲ. ದಾಸ್ತಾನು ಮಾಡಿದ್ದಲ್ಲಿ ಇಡೀ ಮಳಿಗೆ, ಗೋದಾಮುಗಳನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಪಟ್ಟ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

ಎಲ್ಲಾ ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಇರುತ್ತದೆ. ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ. ಅಂತಹ ಪಟಾಕಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. 

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಕಿಗಳನ್ನು ಮಾತ್ರ ಬಳಸಬೇಕು ಮತ್ತು ಪ್ರಮುಖವಾಗಿ ಹಸಿರು ಪಟಾಕಿ ಮಳಿಗೆಯಲ್ಲಿ ತಯಾರಕರು, ಮಾರಾಟಗಾರರು ಮತ್ತು ಎಜೆಂಟ್‌ಗಳಿಗೆ ಮಾತ್ರ ಅನುಮತಿಸಲಾಗುವುದು.

ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್ಟುಗಳನ್ನು ರ‍್ಯಾಂಡಮ್ ಆಗಿ ಸಂಗ್ರಹಿಸಿ, ನಿಗಧಿತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಲಾಗುವುದು. ನಿಗಧಿತ ಗುಣಮಾಪನಗಳಿಗೆ ಸರಿ ಹೊಂದದಿದ್ದಲ್ಲಿ, ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. 

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗು ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು.

ಹಸಿರು ಪಟಾಕಿ ಬಳಸುವ ಬಗ್ಗೆ ಜಿಲ್ಲಾಡಳಿತದಿಂದ ಸಾರ್ವಜನಿಕರು ಹಾಗೂ ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಾಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. 

ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯ ವತಿಯಿಂದ ರಾಜ್ಯದ ಗಡಿಗಳಲ್ಲಿರುವ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತು ಹಾಗೂ ಸಾಗಾಟ ಮಾಡುವ ವಾಹನವನ್ನು ಸಾರಿಗೆ ಇಲಾಖೆ ವತಿಯಿಂದ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

     ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ, ಸಿಡಿಮದ್ದು ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ಹಾಗೂ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ತಯಾರು, ಮಾರಾಟ ಮಾಡುವ ವ್ಯಕ್ತಿ,ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.  

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X