ಸರ್ಕಾರ ರಚನೆಗೆ ಕಾಂಗ್ರೆಸ್ ಮುಂದಾಗಿದ್ದು, ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಡಿಕೆಶಿ- ಸಿದ್ದರಾಮಯ್ಯ ಹೆಸರು ಕೇಳಿಬರುತ್ತಿದೆ. ಭಾನುವಾರ ಸಂಜೆ ವೇಳೆಗೆ ಕಾಂಗ್ರೆಸ್‌ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರು ಫೈನಲ್ ಆಗಲಿದೆ.
ಇಂದು ಸಂಜೆ 6ಕ್ಕೆ ಶಾಂಗ್ರಿಲಾ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕರ ಸಭೆ ನಡೆಯಲಿದ್ದು, ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದಿಢೀರ್ ಆಗಿ ದೆಹಲಿಗೆ ತೆರಳುತ್ತಿದ್ದಾರೆ.
ಡಿ ಕೆ ಶಿವಕುಮಾರ್ ನಿವಾಸದ ಮುಂದೆ ‘ಮುಂದಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು’ ಎಂಬ ಬರಹದ ಫ್ಲೆಕ್ಸ್ ರಾರಾಜಿಸಿದರೆ, ಅತ್ತ ಸಿದ್ದರಾಮಯ್ಯ ನಿವಾಸದ ಮುಂದೆಯೂ ಸಂಭ್ರಮ ಕಳೆಗಟ್ಟಿದೆ. ‘ಸಿದ್ದರಾಮಯ್ಯ ಸಿಎಂ’ ಎಂಬ ಫ್ಲೆಕ್ಸ್ ರಾರಾಜಿಸುತ್ತಿವೆ.
ಭಾನುವಾರ ಬೆಳಿಗ್ಗೆಯೇ ಡಿ ಕೆ ಶಿವಕುಮಾರ್ ಅವರು ತಿಪಟೂರು ತಾಲ್ಲೂಕಿನ ನೊಣವಿನಕೆರೆ ಅಜ್ಜಯ್ಯ ಭೇಟಿಗೆ ತೆರಳಿದ್ದಾರೆ. ಸದ್ಯ ಕರಿಬಸವ ಸ್ವಾಮೀಜಿಯ ಆಶೀರ್ವಾದ ಪಡೆದು,ವಿಶೇಷ ಪೂಜೆ ಸಲ್ಲಿಸಿದ್ದಾರೆ.
