ಉಡುಪಿ ನಗರದ ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿದ್ದು, ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲಿಸಿರುವ ಘಟನೆ ಬುಧವಾರ ನಡೆದಿದೆ.
ದಾಖಲಿಸ್ಪಟ್ಟಿರುವ ವ್ಯಕ್ತಿಯು ಪ್ರಜ್ಞಾಹಿನ ಸ್ಥಿತಿಯಲ್ಲಿದ್ದರಿಂದ ಹೆಸರು ವಿಳಾಸ ತಿಳಿದುಬಂದಿಲ್ಲ. ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಬಸ್ಸು ನಿಲ್ದಾಣದಲ್ಲಿ ಇರ್ವರು ವ್ಯಕ್ತಿಗಳ ನಡುವೆ ಹೊಡೆದಾಟ ನಡೆದಿದ್ದು, ಏಟು ಬಿದ್ದು ಓರ್ವ ಅಸ್ವಸ್ಥನಾದ ಬಳಿಕ, ಹಲ್ಲೆ ಮಾಡಿರುವ ವ್ಯಕ್ತಿಯು ಸ್ಥಳದಿಂದ ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ.
112 ತುರ್ತು ಪೊಲೀಸ್ ಸಹಾಯವಾಣಿ ಸಿಬ್ಬಂದಿಗಳು ಗಸ್ತು ಕರ್ತವ್ಯದಲ್ಲಿದ್ದಾಗ ಬಸ್ಸು ನಿಲ್ದಾಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವಕ ಕಂಡುಬಂದಿದ್ದಾನೆ. ತಕ್ಷಣ ಪೊಲೀಸರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಬಂದ ಅವರು, ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನು ಓದಿದ್ದೀರಾ? ಉಪ ಚುನಾವಣೆ | ಸಂಡೂರು, ಚನ್ನಪಟ್ಟಣಕ್ಕೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್: ಕಗ್ಗಂಟಾದ ಶಿಗ್ಗಾಂವಿ!
ಇದೆ ರೀತಿಯಲ್ಲಿ ಎರಡು ದಿನದ ಹಿಂದೆ ನಗರದ ಹಳೆ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದ ಬಳಿ, ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಹೊಡೆದಾಟ ನಡೆದು, ಚೂರಿ ಇರಿತದಿಂದ ಓರ್ವ ಕೊಲೆಯಾಗಿದ್ದ ಘಟನೆ ಕೂಡ ನಡೆದಿತ್ತು.

Good work , samaja seve