ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ₹25 ಕೋಟಿ ಬಿಡುಗಡೆಗೆ ಶಿಫಾರಸು: ಸಚಿವ ಚಲುವರಾಯಸ್ವಾಮಿ

Date:

Advertisements

ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆರ್ಥಿಕ ಇಲಾಖೆಯಿಂದ 25 ಕೋಟಿ ರೂ. ಬಿಡುಗಡೆಗೆ ಶಿಫಾರಸು ಮಾಡಲಾಗಿದೆ. ಆದಷ್ಟು ಅದರ ಇತಿ ಮಿತಿಯೊಳಗೆ ವೆಚ್ಚ ನಿಯಂತ್ರಣ ಮಾಡಿಕೊಳ್ಳುವುದು ಸೂಕ್ತ ಎಂದು ಮಂಡ್ಯ ಜಿಲ್ಲಾ ಉಸ್ತವಾರಿ ಸಚಿವ ಎನ್. ಚಲುವರಾಯಸ್ವಾಮಿ ಸಲಹೆ ನೀಡಿದರು.

ವಿಕಾಸಸೌಧದ ತಮ್ಮ ಕೊಠಡಿಯಲ್ಲಿ ಬುಧವಾರ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು ಒಂದಾಗಿ ಶ್ರಮಿಸಬೇಕಿದೆ. ಮಂಡ್ಯ ಜಿಲ್ಲೆಯ ಸೊಗಡಿನ ಜೊತೆಗೆ ರಾಜ್ಯದ ಬದುಕನ್ನು ಬೆಸೆಯುವ ಸ್ವರೂಪದಲ್ಲಿ ಕಾರ್ಯಕ್ರಮ ಆಯೋಜಿಸಬೇಕಿದೆ. ಇದರಲ್ಲಿ ಜಿಲ್ಲೆಯ ಎಲ್ಲ ಜನ ಪ್ರತಿನಿಧಿಗಳು ಸಂಘ ಸಂಸ್ಥೆಗಳು, ಸಾಹಿತಿಗಳು, ಚಿಂತಕರು, ಅಧಿಕಾರಿ ಸಿಬ್ಬಂದಿ ಹೆಚ್ಚಿನ ಕಾಳಜಿ, ಪರಿಶ್ರಮ ವಹಿಸಬೇಕು” ಎಂದರು.

Advertisements

“ಸಭೆಯಲ್ಲಿ ವಿವಿಧ ಉಪ ಸಮಿತಿಗಳ ಅಧ್ಯಕ್ಷರಾದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳ ಅಭಿಪ್ರಾಯ, ಸಮಿತಿಗಳ ತೀರ್ಮಾನಗಳನ್ನು ಆಲಿಸಿದ ಸಚಿವರು ಸಾಹಿತ್ಯ-ಸಂಭ್ರಮಕ್ಕೆ ಯಾವುದೇ ಕೊರತೆಯಾಗದಂತೆ ಸಂಘಟನೆ ಮಾಡಬೇಕು. ಮಂಡ್ಯ ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಬೇಕು. ವ್ಯಾಪಕ ಪ್ರಚಾರ, ಉತ್ತಮ ಅಲಂಕಾರ ಮಾಡಬೇಕು. ಆಕರ್ಷಕ ಮೆರವಣಿಗೆ, ಅರ್ಥಪೂರ್ಣ ವಿಚಾರಗೋಷ್ಠಿ, ಕಾರ್ಯಕ್ರಮಗಳು, ಮುದ್ದೆ ಬಸ್ಸಾರು ಸೇರಿದಂತೆ ಸ್ಥಳೀಯ ಆಹಾರ ಹಾಗೂ ಉತ್ತರ ಕರ್ನಾಟಕದ ತಿನಿಸಿಸುಗಳ ಸಮಿಶ್ರಣಗೊಂಡ ಊಟೋಪಚಾರ ವ್ಯವಸ್ಥೆ ಮಾಡುವಂತೆ” ಸಚಿವ ಚಲುವರಾಯಸ್ವಾಮಿ ಸೂಚಿಸಿದರು.

“ಸಾಹಿತ್ಯ ಸಮ್ಮೇಳನದ ಮೊದಲೆರಡು ದಿನ ಸಂಜೆಯ ನಂತರ ಅತ್ಯುತ್ತಮ ಸಾಂಸ್ಕೃತಿಕ ಕಾರ್ಯಮಗಳನ್ನು ಆಯೋಜಿಸಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಸಮ್ಮೆಳನಕ್ಕೆ ವಿಶೇಷ ಬಸ್ ಸಂಪರ್ಕ ವ್ಯವಸ್ಥೆ ಮಾಡಬೇಕು” ಎಂದು ನಿರ್ದೇಶನ ನೀಡಿದರು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯ ಅಧ್ಯಕ್ಷರಾದ ರಮೇಶ ಬಂಡಿಸಿದ್ದೇಗೌಡ, ಶಾಸಕರಾದ ನರೇಂದ್ರಸ್ವಾಮಿ, ರವಿಕುಮಾರ್ (ಗಣಿಗ), ಉದಯ್ ಗೌಡ, ದರ್ಶನ್ ಪುಟ್ಟಣ್ಣಯ್ಯ, ವಿಧಾನಸಭಾ ಪರಿಷತ್ ಸದಸ್ಯರಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾದ ನಾಡೋಜ ಮಹೇಶ್ ಜೋಷಿ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮೀರಾ ಶಿವಲಿಂಗಯ್ಯ ಮತ್ತಿತರರು ಉಪಸ್ಥಿತರಿದ್ದು, ಸಮ್ಮೇಳನದ ಯಶಸ್ವಿ ಸಂಘಟನೆ ಕುರಿತು ಸಲಹೆಗಳನ್ನು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X