ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರು ಗ್ರಾಮದಲ್ಲಿ ನಡೆದಿದೆ.
ಹೆಗ್ಗಾರು ಗ್ರಾಮದ ಹುಲುತಾಳುವಿನ ಕೃಷ್ಣೇಗೌಡ ಎಂಬುವವರ ಪತ್ನಿ ಸುಶೀಲ(55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಇದನ್ನು ಓದಿದ್ದೀರಾ? ಮಂಗಳೂರು | ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋಗೆ ಪಿಕಪ್ ಡಿಕ್ಕಿ: ವಿದ್ಯಾರ್ಥಿನಿ ಮೃತ್ಯು; ಮೂವರಿಗೆ ಗಾಯ
ಮಹಿಳೆಗೆ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
