ಹಿಸಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸವರ್ಣಿಯರು ಇಬ್ಬರು ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಪ್ರಕರಣದ ಕುರಿತು ಇಬ್ಬರು ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸ್ವತಂತ್ರ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಉತ್ತರಪ್ರದೇಶದ ಮಾಜಿ ಡಿಜಿಪಿಗಳಾದ ವಿಕ್ರಮ್ ಚಂದ್ ಗೋಯಲ್ ಮತ್ತು ಕಮಲೇಂದ್ರ ಪ್ರಸಾದ್ ಅವರು ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆಯನ್ನು ನಡೆಸುವಂತೆ ಮತ್ತು ಪ್ರಸ್ತುತ ವಸ್ತುಸ್ಥಿತಿ ವರದಿಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್ ನೇತೃತ್ವದ ಸುಪ್ರೀಂಕೋರ್ಟ್ ನ್ಯಾಯಪೀಠ ಹೇಳಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಿಯಾಂಕಾ ಲೋಕಸಭೆ ಪ್ರವೇಶ; ಮೋದಿ ವಿರುದ್ಧದ ದಾಳಿಗೆ ಮತ್ತಷ್ಟು ಮೊನಚು
2017ರಲ್ಲಿ ದಲಿತರಿಗೆ ಸಾಮಾಜಿಕ ಬಹಿಷ್ಕಾರದ ಆರೋಪಗಳಿಗೆ ಸಂಬಂಧಿಸಿದಂತೆ ಸ್ಥಿತಿಗತಿ ಮಾತ್ರವಲ್ಲದೆ, ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಪೀಠವು ಇಬ್ಬರು ಮಾಜಿ ಡಿಜಿಪಿಗಳಿಗೆ ಸೂಚಿಸಿದೆ.
ಇತ್ತೀಚಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ, ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. 2017ರ ಆ.20ರಂದು ಈ ಕುರಿತು ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ಕೋರ್ಟ್ ಗಮನಕ್ಕೆ ತರಲಾಗಿದೆ. ಪ್ರಕರಣದ ಏಳು ಆರೋಪಿಗಳ ಪೈಕಿ 6 ಮಂದಿಗೆ ಹರಿಯಾಣ ಪೊಲೀಸರು ಕ್ಲೀನ್ ಚಿಟ್ ನೀಡಿದ್ದರು.
