ಶಿವಮೊಗ್ಗ ಜಿಲ್ಲೆಯ ಆನಂದಪುರದಿಂದ ಶಿಕಾರಿಪುರ ರಾಷ್ಟ್ರೀಯ ಹೆದ್ದಾರಿಯ ಕಣ್ಣೂರು ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲಿ ಒಂದು ಬೃಹತ್ತಾದ ಒಣಗಿದ ಮರ ಬೀಳುವ ಹಂತಕ್ಕೆ ತಲುಪಿದ್ದು, ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ವಿದ್ಯುತ್ ಕಂಬಗಳು ಸಹ ಮರದ ಅಕ್ಕಪಕ್ಕದಲ್ಲಿದೆ ಹಾಗೂ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವಾರು ವಾಹನಗಳು ದಿನನಿತ್ಯ ಸಂಚರಿಸುತ್ತವೆ. ಶಾಲಾ-ಕಾಲೇಜುಗಳಿಗೆ ಮಕ್ಕಳು ನಡೆದುಕೊಂಡು ಹೋಗುತ್ತಿರುತ್ತಾರೆ. ಒಂದು ವೇಳೆ ದಿಡೀರನೆ ಈ ಬೃಹತ್ ಮರ ಬಿದ್ದರೆ ಬಹಳ ಅನಾಹುತಗಳು ಸಂಭವಿಸಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗನೆ ಈ ಮರವನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಗಳಿಗೆ ಅಧಿಕಾರಿಗಳೇ ನಾಂದಿ ಹಾಡಿದಂತಾಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.
ವರದಿ: ಅಮಿತ್. ಆರ್, ಆನಂದಪುರ
