ಲಿಫ್ಟ್‌ಗೆಂದು ತೆಗೆದಿದ್ದ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರದ ಕಾಡುಗೋಡಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಶ್ರೀಕನ್ಯಾ ಹಾಗೂ ಮುನಿರಾಜು ದಂಪತಿ ಪುತ್ರ ಸುಹಾಸ್ ಗೌಡ ಎಂದು ಗುರುತಿಸಲಾಗಿದೆ.
ಕಾಮಗಾರಿ ಹಂತದಲ್ಲಿದ್ದ ಕಟ್ಟಡವೊಂದರಲ್ಲಿ ಲಿಫ್ಟ್‌ಗೆಂದು ಗುಂಡಿಯೊಂದನ್ನು ತೋಡಲಾಗಿದ್ದು ಅದರಲ್ಲಿ ನೀರು ತುಂಬಿಕೊಂಡಿತ್ತು. ಆಟವಾಡುತ್ತಿದ್ದ ಬಾಲಕ ಈ ಗುಂಡಿಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಬಳ್ಳಾರಿ | ಲಿಫ್ಟ್ ಕುಸಿದು ಕಾರ್ಮಿಕ ಸಾವು
ಕನ್ನಮಂಗಲದಲ್ಲಿ ಹಾಲಿನ ಡೇರಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು ಇಲ್ಲಿ ಲಿಫ್ಟ್‌ಗಾಗಿ ಗುಂಡಿ ಅಗೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಿ ಅಧ್ಯಕ್ಷ ಸೊಣ್ಣಪ್ಪ, ಸೆಕ್ರೆಟರಿ ಸುನೀಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಟ್ಟಡ ನಿರ್ಮಿಸುವವರ ಬೇಜವಾಬ್ದಾರಿಯಿಂದಾಗಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.
