ಭಾರೀ ಕ್ರೇನ್ ಚಕ್ರ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಬಳಿಯ ಹೊಂಡಾ ಶೋರೂಮ್ ಬಳಿ ಮುದ್ದೇಬಿಹಾಳ ನಾರಾಯಣಪುರ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.
ಮೃತನನ್ನು ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ನಾಗರಹಾಳ ಗ್ರಾಮದ ಶಿವಪುತ್ರಪ್ಪ ಭಜಂತ್ರಿ(48) ಎಂದು ಗುರುತಿಸಲಾಗಿದೆ.
ಭಜಂತ್ರಿ ಎಂಬುವವರು ಬೈಕ್ ಮೇಲೆ ಹೊರಟಿದ್ದಾಗ ಎದುರಿನಿಂದ ಬಂದ ಕ್ರೇನ್‌ನ ಮುಂದಿನ ಚಕ್ರ ಬಡಿದಿದೆ. ಆಯತಪ್ಪಿ ನೆಲಕ್ಕೆ ಬಿದ್ದ ಆತನ ದೇಹದ ಮೇಲೆ ಕ್ರೇನ್‌ನ ಮಧ್ಯದ ಚಕ್ರಗಳು ಹರಿದು ಈ ದುರಂತ ಸಂಭವಿಸಿದೆ.
ಈ ಸುದ್ದಿ ಓದಿದ್ದೀರಾ? ಕೊಡಗು | ಪ್ರೇಯಸಿ ಪತಿಯ ಕೊಲೆಗೆ ಯತ್ನಿಸಿದ ಪೊಲೀಸ್ ಪೇದೆ!
ಸ್ಥಳಕ್ಕೆ ಮುದ್ದೇಬಿಹಾಳ ಸಿಪಿಐ ಮಲ್ಲಿಕಾರ್ಜುನ ತುಳಸೀಗೇರಿ, ಪಿಎಸ್‌ವೈ ಸಂಜಯ್ ತಿಪ್ಪಾರಡ್ಡಿ ಭೇಟಿ ನೀಡಿ ಕಾನೂನು ಕ್ರಮ ಕೈಕೊಂಡಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.