ಮೈಸೂರು ನಗರದ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಾಲಯದಿಂದ 2022-23ನೇ ಸಾಲಿನ ‘ಕಾಯಕಲ್ಪ ಪ್ರಶಸ್ತಿʼ ಪ್ರದಾನ ಸಮಾರಂಭ ಆಯೋಜಿಸಿದ್ದರು.
2022-23ನೇ ಸಾಲಿನಲ್ಲಿ ಜಿಲ್ಲಾದ್ಯಂತ ಸುಮಾರು 67 ಆರೋಗ್ಯ ಕೇಂದ್ರಗಳು ಕಾಯಕಲ್ಪ ಪ್ರಶಸ್ತಿಗೆ ಭಾಜನವಾಗಿದ್ದು, ಸದರಿ ಆರೋಗ್ಯ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ ಪ್ರಶಂಸಾ ಪತ್ರಗಳನ್ನು ವಿತರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಗಾಯತ್ರಿ ಕೆ ಎಂ ನೇತೃತ್ವದಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ವೈದ್ಯಾಧಿಕಾರಿಗಳ 2ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಸಿಇಒ ಕೆ ಎಂ ಗಾಯತ್ರಿ, “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಮಾರ್ಗಸೂಚಿ ಅನುಸಾರ ಪರಿಣಾಮಕಾರಿ ಅನುಷ್ಠಾನ ಮಾಡಿ, ಶೇ.100ರಷ್ಟು ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಲು ಕಟ್ಟುನಿಟ್ಟಾಗಿ ಕ್ರಮ ವಹಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಕೊಡಗು | ಅ.25ರಿಂದ ಅನೈರ್ಮಲ್ಯ ಶೌಚಾಲಯ, ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಸಮೀಕ್ಷೆ: ವೆಂಕಟ್ ರಾಜಾ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಕುಮಾರಸ್ವಾಮಿ ಪಿ ಸಿ ಹಾಗೂ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಇದ್ದರು.