ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ​ ಘೋಷಣೆ

Date:

Advertisements

ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಇಂದು (ಅಕ್ಟೋಬರ್ 24) ಅಧಿಕೃತ ಆದೇಶ ಹೊರಡಿಸಿದ್ದಾರೆ.

ಹಾನಗಲ್​ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್​ ಅಹ್ಮದ್​ ಖಾನ್​ ಪಠಾಣ್, ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಿದ್ದರು. ಇದೀಗ ಉಪಚುನಾವಣೆಗೂ ಸಹ ಕಾಂಗ್ರೆಸ್​, ಹೈಕಮಾಂಡ್ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರನ್ನೇ ಕಣಕ್ಕಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ

ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್​ಗಾಗಿ ಕಾಂಗ್ರೆಸ್​​ನಲ್ಲಿ ಭಾರಿ ಪೈಪೋಟಿ ನಡೆದಿತ್ತು. ಕಳೆದ ಐದು ಚುನಾವಣೆಗಳಲ್ಲೂ ಸಹ ಮುಸ್ಲಿಂ ಸಮುದಾಯಕ್ಕೆ ಟಿಕೆಟ್​ ನೀಡಲಾಗಿದ್ದು, ಈ ಬಾರಿ ಲಿಂಗಾಯತ ಸಮುದಾಯಕ್ಕೆ ಟಿಕೆಟ್​ ನೀಡಬೇಕೆಂಬ ಕೂಗು ಕೇಳಿ ಬಂದಿದ್ದವು.

ಅಲ್ಪಸಂಖ್ಯಾತ ಸಮುದಾಯದಿಂದ ಅಜ್ಜಂಫೀರ್ ಖಾದ್ರಿ ಹಾಗೂ ಯಾಸೀರ್ ಖಾನ್ ಪಠಾಣ್ ನಡುವೆ ಪೈಪೋಟಿ ಇತ್ತು. ಮತ್ತೊಂದೆಡೆ ಲಿಂಗಾಯತ ಸಮುದಾಯದಿಂದ ಸಂಜೀವ್ ನೀರಲಗಿ, ಸೋಮಣ್ಣ ಬೇವಿನಮರ ಅವರು ಟಿಕೆಟ್​ಗಾಗಿ ಕಸರತ್ತು ನಡೆಸಿದ್ದರು. ಆದರೆ, ಅಂತಿಮವಾಗಿ ಹೈಕಮಾಂಡ್​ ಮತ್ತೆ ಯಾಸೀರ್ ಖಾನ್ ಪಠಾಣ್ ಅವರಿಗೆ ಮಣೆ ಹಾಕಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X