ಚಿಕ್ಕಬಳ್ಳಾಪುರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 01 ಮತ್ತು ಪರಿಶಿಷ್ಟ ಪಂಗಡದ 01 ಅಭಿವೃದ್ಧಿಗಳ ಆಯ್ಕೆಗೆ ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರರಿಗೆ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಒಳಗಿರಬೇಕು. ತರಬೇತಿಯ ಅವಧಿಯಲ್ಲಿ ಮಾಹೆಯಾನ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುವುದು. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಯಾವುದೇ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೆ ಇದ್ದಲ್ಲಿ ನೆರೆಯ ಜಿಲ್ಲೆಗಳಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
2024ರ ನವೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಇಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕಚೇರಿಗೆ ಸಲ್ಲಿಸಬಹುದಾಗಿದೆ.
ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಮೊ.ನಂ.9480841224, ವಾರ್ತಾ ಸಹಾಯಕರ ಮೊ.ನಂ. 9353592472 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.