ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಅಲ್ಲದೇ ಎಲ್ಲ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶಿಸಿ ಆದರೆ, ಶಿಕ್ಷೆ ಪ್ರಮಾಣವನ್ನೂ ನಾಳೆಗೆ (ಅಕ್ಟೋಬರ್ 25) ಕಾಯ್ದಿರಿಸಿದೆ.
ಮುಟ್ಟುಗೋಲು ಮಾಡಿಕೊಳ್ಳಲಾಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅಪರಾಧಿಗಳಾದ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಸೇರಿದಂತೆ ಮೂವರ ಅಪರಾಧಿಗಳಿಗೆ ನಾಳೆ ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.
ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ
ಬೆಲೇಕೆರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳಲ್ಲಿ ಇಂದು ಅಂತಿಮ ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದ ತನಿಖಾ ಸಂಸ್ಥೆ ಸಿಬಿಐನಿಂದ ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿತ್ತು.
ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದ ಆಲಿಸಿ ಅಂತಿಮ ಆದೇಶವನ್ನು ಹೊರಡಿಸಿದ್ದಾರೆ. ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಳ್ ಬಿಲಿಯಾ ಸೇರಿ ಹಲವರ ವಿರುದ್ಧದ ಕೇಸ್ ಇದೆ. ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್ ಬಿಳೆಯಿ, ಶಾಸಕ ಸತೀಶ್ ಸೇರಿ ಎಲ್ಲಾ ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ.
