ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 24 ರಂದು ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂದಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.
ಆದರೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ಏಕಸದಸ್ಯ ಪೀಠ ರದ್ದುಗೊಳಿಸಿ ರಾಜ್ಯಪಾಲರ ಕ್ರಮ ಸರಿಯಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು. ಇದೀಗ ಏಕಸದಸ್ಯ ಪೀಠದ ಆದೇಶ ರದ್ದುಪಡಿಸುವಂತೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ
ಅರ್ಜಿಯು ಇನ್ನಷ್ಟೇ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 24ರಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದಾದ ಸರಿಸುಮಾರು ಒಂದು ತಿಂಗಳ ಬಳಿಕ ವಕೀಲ ಶತಭಿಷ್ ಶಿವಣ್ಣ ಅವರ ಮೂಲಕ ಮೇಲ್ಮನವಿ ಸಲ್ಲಿಕೆಯಾಗಿದೆ.