ಸಾಲಬಾಧೆ ತಾಳಲಾರದೆ 38 ವರ್ಷದ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ತಾಲೂಕಿನ ಕಪಲಾಪುರ ಗ್ರಾಮದಲ್ಲಿ ನಡೆದಿದೆ.
ಶಿವಕುಮಾರ್ ಸಂಗನಬಸಪ್ಪ (38) ಆತ್ಮಹತ್ಯೆಗೆ ಶರಣಾದ ರೈತ.
ರೈತ ಶಿವಕುಮಾರ್ ಅವರು ಡಿಸಿಸಿ ಬ್ಯಾಂಕ್‌ನಲ್ಲಿ ರೂ.4 ಲಕ್ಷ ಸಾಲ ಪಡೆದಿದ್ದಲ್ಲದೆ, ಸಹ ಗ್ರಾಮಸ್ಥರಿಂದಲೂ ಕೈ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಆಗದೆ ಮನನೊಂದು ಹೊಲದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ.
ಈ ಕುರಿತು ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.